ಮಂಗಳೂರು:ಸಾವು ಹೇಗೆ, ಎಲ್ಲಿಂದ, ಯಾವ ರೀತಿಯಲ್ಲಿ ಬರುತ್ತದೆ ಎಂದು ಹೇಳುವುದು ಕಷ್ಟ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ರಸ್ತೆ ಪಕ್ಕ ನಿಂತಿದ್ದ ಕಾರೊಂದರ ಮೇಲೆ ಲಾರಿ ಮಗುಚಿ ಬಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.
ಉಡುಪಿ ಕಡೆಗೆ ಗೋಣಿ ಚೀಲಗಳನ್ನು ಹೊತ್ತು ಸಾಗುತ್ತಿದ್ದ ಲಾರಿ, ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಆಗ ಮಗುಚಿದ ಲಾರಿ ರಸ್ತೆ ಬಳಿ ನಿಂತಿದ್ದ ಒಮ್ನಿ ಕಾರಿನ ಮೇಲೇ ಬಿದ್ದಿದೆ. ಪರಿಣಾಮವಾಗಿ ಕಾರು ಲಾರಿಯಡಿಗೆ ಸಿಲುಕಿಕೊಂಡಿತ್ತು. ಲಾರಿಯಡಿಗೆ ಸಿಕ್ಕಿ ಅಪ್ಪಚ್ಚಿಯಾದ ಕಾರನ್ನು ತೆರವುಗೊಳಿಸಲು ಎರಡು ಕ್ರೇನ್​ಗಳನ್ನು ಬಳಸಲಾಗಿತ್ತು.
ಮಂಗಳೂರು ಹೊರವಲಯದ ಸುರತ್ಕಲ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Video | ಚಲಿಸುತ್ತಿದ್ದ ಕಾರಿನ ಮೇಲೇ ಬಿತ್ತು ಬೃಹತ್ ಕೊಂಬೆ; ಬೆಚ್ಚಿ ಬೀಳಿಸುವಂಥ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video | ರೈಲ್ವೆ ಗೇಟ್ ದಾಟಿ ಹಳಿ ಮೇಲೇ ನಿಂತ ಲಾರಿ; ಬಂದಪ್ಪಳಿಸಿಯೇ ಬಿಡ್ತು ಎಕ್ಸ್​ಪ್ರೆಸ್​ ಟ್ರೇನ್​!

ಮನೆ ಮೇಲೇ ಕುಸಿದು ಬಿದ್ದ ಗುಡ್ಡ; ಮಣ್ಣಿನಡಿ ಸಿಲುಕಿದ ನಾಲ್ವರ ಪೈಕಿ ಒಬ್ಬನ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
