ಬೆಂಗಳೂರು:ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟೈರ್​ ಬ್ಲಾಸ್ಟ್​ ಆದ ಕಾರಣ ಟಿಪ್ಪರ್ ಲಾರಿಯೊಂದು ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ:ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಿ, ಪಾಲಕರಿಗೆ ಡಾ.ಶಿವಕುಮಾರ ನಾರಾ ಸಲಹೆ
ಘಟನೆಯ ವಿವರ:ಇಂದು ಮಧ್ಯಾಹ್ನ ಸುಮಾರು 4:10ಕ್ಕೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಹೆದ್ದಾರಿಯಲ್ಲಿ ಟೈರ್​ ಬ್ಲಾಸ್ಟ್​ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್​ ಲಾರಿಯೊಂದು, ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಹೈವೇಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಬಸ್ ಹಾಗೂ ಟಿಪ್ಪರ್ ಚಾಲಕನಿಗೆ ಸಣ್ಣಾಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮಂಡ್ಯದಲ್ಲಿ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು: ಸಚಿವ ಸಿಆರ್‌ಎಸ್ ವಿರುದ್ಧ ಷಡ್ಯಂತ್ರ ಆರೋಪ
ಅಪಘಾತದಲ್ಲಿ ಟಿಪ್ಪರ್ ಮುಂಬಾಗ ಮತ್ತು ಬಸ್​ನ ಹಿಂಬಾಗ ಸಂಪೂರ್ಣ ಜಖಂಗೊಂಡಿದ್ದು. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ದುಬಾರಿಯಾಯ್ತು ‘ಜೈಲರ್’​ ಟಿಕೆಟ್ ದರ!; ಏರಿಕೆ ಜತೆಗೆ ಬುಕ್ಕಿಂಗ್​ನಲ್ಲಿ ಹೊಸ ದಾಖಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − one =
Remember me
