ಧಾರವಾಡ:ಕಿಲ್ಲರ್ ಬೈಪಾಸ್ ಎಂದೇ ಪ್ರಸಿದ್ಧಿಯಾಗಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್​ನ ಇಟ್ಟಿಗಟ್ಟಿ ಕ್ರಾಸ್​ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ 12 ಮಹಿಳೆಯರು ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.
ಪ್ರತಿ ವರ್ಷ ಜನವರಿ ತಿಂಗಳಿನಲ್ಲೇ ಇಟ್ಟಿಗಟ್ಟಿ-ಯರಿಕೊಪ್ಪ ಮಧ್ಯೆ ಪದೇಪದೆ ಅಪಘಾತ ಸಂಭವಿಸುತ್ತಿದೆ. 2020ರ ಜನವರಿ 26ರಂದು ಇದೇ ರಸ್ತೆಯಲ್ಲಿ ಕುಂದಗೋಳ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಅವರ ಕಾರು ಅಪಘಾತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ಸ್ವಾಮೀಜಿ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದವರೂ ಮೃತಪಟ್ಟಿದ್ದರು. 2011ರ ಜನವರಿ 15ರಂದೂ ಇದೇ ಜಾಗದಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಆ ವೇಳೆಯೂ 11 ಜನರ ಜೀವ ಹೋಗಿತ್ತು.ಇದನ್ನೂ ಓದಿರಿವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್
ಧಾರವಾಡ-ಹುಬ್ಬಳ್ಳಿ ಮಧ್ಯದ ಬೈಪಾಸ್ ರಸ್ತೆ ಇಕ್ಕಟ್ಟಾಗಿದ್ದು, ಈ ಭಾಗದಲ್ಲಿ ರಸ್ತೆ ಅಗಲೀಕರಣ ಆಗಿಲ್ಲ. ಹುಬ್ಬಳ್ಳಿಯ ಗಬ್ಬೂರ ಬೈಪಾಸ್​ನಿಂದ ಧಾರವಾಡದ ನರೇಂದ್ರ ವರೆಗೆ ಸಿಂಗಲ್​ ಲೇನ್​ ಇದೆ. ಪರಿಣಾಮ ಈ ಸ್ಥಳ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ರಸ್ತೆ ಅಗಲೀಕರಣಕ್ಕಾಗಿ ಹಲವರು ಹೋರಾಟ ಮಾಡಿದ್ದರೂ ಪ್ರಯೋಜನವಾಗಿಲ್ಲ.
ಇಟ್ಟಿಗಟ್ಟಿ ಕ್ರಾಸ್​ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ ಶೆಟ್ಟರ್, ಹು-ಧಾ ಮಧ್ಯೆ 6 ಲೇನ್ ರಸ್ತೆ ಆಗಬೇಕು. ಈ ಸಂಬಂಧ ಈಗಾಗಲೇ ಡಿಪಿಆರ್ ರೆಡಿ ಆಗ್ತಿದೆ. ಹಾಲಿ ರಸ್ತೆ ಅಶೋಕ್​ ಖೇಣಿ ಒಡೆತನದ ನೈಸ್ ಸಂಸ್ಥೆ ಒಡೆತನದಲ್ಲಿದೆ. ಅವರನ್ನ ಭೇಟಿಯಾಗಿ ರಸ್ತೆ ವಿಸ್ತರಣೆ ಬಗ್ಗೆ ಮಾತನಾಡಿದ್ದೇವೆ. 2024ರ ವರೆಗೆ ನೀವೆ ಟೋಲ್ ಕಲೆಕ್ಟ್ ಮಾಡಿಕೊಳ್ಳಿ, ಆದ್ರೆ ರಸ್ತೆ ವಿಸ್ತರಣೆಗೆ ಅವಕಾಶ ಕೊಡಿ ಅಂತ ವಿನಂತಿಸಿದ್ದೇವೆ. ಇದಕ್ಕೆ ಅವರೂ ಸಮ್ಮತಿಸಿದ್ದಾರೆ. ಈ ಬಗ್ಗೆ ಒಪ್ಪಿಗೆ ಪತ್ರ ಕೊಟ್ಟಿದ್ದಾರೆ. ನಿತಿನ್ ಗಡ್ಕರಿ ಅವರಿಗೂ ಹೇಳಿದ್ದೇನೆ ಎಂದರು. 6 ಲೇನ್ ರಸ್ತೆ ಆಗೋದ್ರಿಂದ ರಸ್ತೆ ಅಪಘಾತ ತಡೆಯಬಹುದು ಎಂದರು.
ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
