ಬೆಂಗಳೂರು:ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದ ದಾಂಧಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿರಿಡಿಜೆ ಹಳ್ಳಿ ಗಲಭೆ ಆರಂಭದ ಆ ಕ್ಷಣ… ಪೊಲೀಸ್​ ಠಾಣೆಯಲ್ಲಿದ್ದುಕೊಂಡೇ ಸಾವಿರಾರು ಜನರನ್ನು ಕರೆಸಿಕೊಂಡ ದುಷ್ಕರ್ಮಿಗಳು
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಸಾರ್ವಜನಿಕ ಆಸ್ತಿ ಹಾಳು ಮಾಡಿದವರನ್ನು ಸಿಸಿಟಿವಿ ಫೂಟೇಜ್​ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಮೂಲಕ ಗುರುತಿಸಲಾಗುವುದು. ಅವರಿಂದಲೇ ನಷ್ಟ ವಸೂಲು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಗಲಭೆಗಳು ಸಂಭವಿಸಿದಾಗ ಆಗುವ ಹಾನಿಯನ್ನು ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿದೆ. ಅದನ್ನು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೂ ಅನ್ವಯಿಸಲಾಗುವುದು. ಗಲಭೆಕೋರರ ಆಸ್ತಿಪಾಸ್ತಿ ಮಾರಾಟ ಮಾಡಿ, ಗಲಭೆಯಿಂದ ಆಗಿರುವ ನಷ್ಟ ತುಂಬಿಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ.
— B.S.Yediyurappa (@BSYBJP)August 12, 2020

ಮಂಗಳವಾರ ರಾತ್ರಿ ಕಾವಲ್​ಭೈರಸಂದ್ರ ವಾರ್ಡ್​ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಶಾಸಕರ ಮನೆ, ಪೊಲೀಸ್​ ಠಾಣೆ, ಅಂಗಡಿಗಳು ಸೇರಿದಂತೆ ಸಿಕ್ಕಸಿಕ್ಕ ವಾಹನಗಳ ಮೇಲೂ ಕಿಡಿಗೇಡಿಗಳ ಗುಂಪು ಮನಸೋ ಇಚ್ಛೆ ದಾಂಧಲೆ ನಡೆಸಿತ್ತು. ಡಿಜೆ ಹಳ್ಳಿ ಪೊಲೀಸ್​ ಠಾಣೆ, ಶಾಸಕ ಶ್ರೀನಿವಾಸ ಮೂರ್ತಿ ಅವರ ಮನೆಗೂ ಬೆಂಕಿ ಇಟ್ಟು ವಿಕೃತಿ ಮೆರೆದದ್ದರು. ಪೊಲೀಸರು, ಪತ್ರಕರ್ತರ ಮೇಲೂ ಕಲ್ಲುತೂರಾಟ, ಬಾಟಲಿಗಳನ್ನು ಎಸೆದು ಇಡೀ ಏರಿಯಾವನ್ನೇ ಪ್ರಕ್ಷುಬ್ಧ ಸ್ಥಿತಿಗೆ ತಂದೊಡ್ಡಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡೇಟಿಗೆ ಮೂವರು ಬಲಿಯಾಗಿದ್ದಾರೆ.
ಈ ಗಲಭೆಗೆ ಶಿವಾಜಿನಗರದಲ್ಲಿ ಧಾರ್ಮಿಕ ಶಾಲೆ ನಡೆಸುತ್ತಿರುವ ಸೈಯದ್ ಅಜ್ನಾನ್, ಎಸ್‌ಡಿಪಿಐ ಪಕ್ಷದ ಮುಖಂಡ ಮುಜಾಮಿಲ್ ಪಾಷ ಪ್ರಮುಖ ಕಾರಣ ಎಂದು ಪೊಲೀಸ್​ ತನಿಖೆಯಲ್ಲಿ ಗೊತ್ತಾಗಿದ್ದು, ಅವರಿಬ್ಬರನ್ನೂ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ 137 ಮಂದಿಯನ್ನು ಬಂಧಿಸಲಾಗಿದೆ.
ನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ… ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 14 =
Remember me
