ಬೆಂಗಳೂರು:ವಿಆರ್​ಎಲ್ ಸಮೂಹ ಸಂಸ್ಥೆಯ ಚೇರ್ಮನ್, ಪದ್ಮಶ್ರೀ ಡಾ.ವಿಜಯ ಸಂಕೇಶ್ವರ ಅವರ (ಆ.2) ಹುಟ್ಟುಹಬ್ಬಕ್ಕೆ ನಾಡಿನಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದೆ ಮಂಗಳಾ ಸುರೇಶ್ ಅಂಗಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಸೇರಿ ಗಣ್ಯರು, ಸಾರ್ವಜನಿಕರು, ವಿಆರ್​ಎಲ್ ಸಂಸ್ಥೆಯ ಉದ್ಯೋಗಿ ಗಳು, ಕುಟುಂಬಸ್ಥರು, ಸ್ನೇಹಿತರು ಜನ್ಮದಿನಕ್ಕೆ ಶುಭಕೋರಿದ್ದಾರೆ.
ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಟ್ವೀಟ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ಯಶಸ್ವಿ ಉದ್ಯಮಿಗಳು, ನನ್ನ ಆತ್ಮೀಯರಾದ ಶ್ರೀ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ನಿಮ್ಮ ಮೇಲೆ ಸದಾ ಇರಲಿ’ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ‘ಕೂ’ ಕನ್ನಡ ಟ್ವೀಟ್ ಮೂಲಕ ಶುಭ ಕೋರಿದೆ. ಡಾ. ವಿಜಯ ಸಂಕೇಶ್ವರ ಅವರಿಗೆ ಉತ್ತಮ ಆರೋಗ್ಯ, ದೀರ್ಘ ಆಯುಷ್ಯ ನೀಡಿ ಕಾಪಾಡಲೆಂದು ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ರಾಜ್ಯ ಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ದುರ್ಯೋಧನ ಐಹೊಳೆ, ಶಾಸಕ ಬಸವರಾಜ್ ಮತ್ತಿಮಡು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ, ಮಾಜಿ ಸಚಿವರಾದ ಪ್ರಭು ಚವಾಣ್, ಬಿ.ಸಿ. ಪಾಟೀಲ್, ಶ್ರೀಮಂತ ಪಾಟೀಲ್, ಶಶಿಕಲಾ ಜೊಲ್ಲೆ , ಕೆ.ಗೋಪಾಲಯ್ಯ, ಕೆಆರ್​ಡಿಎಲ್ ಅಧ್ಯಕ್ಷ ಎಂ.ರುದ್ರೇಶ್, ವಿಧಾನ ಪರಿಷತ್ ಸದಸ್ಯ ಮಹಂತೇಶ್ ಕವಟಗಿಮಠ, ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್​ಲಾಲ್ ಆರ್ಯಾ, ಸಂಸದರಾದ ಡಾ.ಜಿಎಂ ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಶಾಸಕರಾದ ಮುನಿರತ್ನ, ಅರವಿಂದ ಬೆಲ್ಲದ್, ಮಾಜಿ ಎಂಎಲ್​ಸಿಗಳಾದ ವೀರಣ್ಣ ಮತ್ತಿಕಟ್ಟಿ, ರಾಮಚಂದ್ರಗೌಡ ಶುಭಾಶಯ ಕೋರಿದ್ದಾರೆ.
ಶ್ರೀಗಳಿಂದ ಶುಭ ಹಾರೈಕೆ:ಶ್ರೀ ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಕಾಶಿ ಜಗದ್ಗುರುಗಳು, ಶ್ರೀ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು, ಶ್ರೀಶೈಲ ಜಗದ್ಗುರುಗಳು, ಶ್ರೀ ಕರಿವೃಷಭ ದೇಶೀಕೇಂದ್ರ ಮಹಾಸ್ವಾಮಿಗಳು, ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು, ಶ್ರೀ ದಿಂಗಾಲೇಶ್ವರ ಮಹಾಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀ ಉಜ್ಜಯಿನಿ ಜಗದ್ಗುರು, ಶ್ರೀ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು, ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು ನೆಲಮಂಗಲದ ಬಸವಣ್ಣದೇವರ ಮಠದ ಶ್ರೀಗಳು ಶುಭ ಕೋರಿದ್ದಾರೆ.
ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

ಪೊಲೀಸರಿನ್ನು ಕ್ರಿಮಿನಲ್‌ಗಳ ಜತೆ ಪಾರ್ಟಿಗೆ ಹಾಜರಾಗುವಂತಿಲ್ಲ; ರೌಡಿ-ಗೂಂಡಾಗಳ ಸಮಾರಂಭಗಳಲ್ಲಿ ಭಾಗಿ ಆಗುವಂತಿಲ್ಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + 2 =
Remember me
