ಬೆಂಗಳೂರು:ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.
ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿ ಚಂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್​ ತಾಯಿ ನಗರದ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್​ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್​ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. ಮುಂದೆ ಏನೆಲ್ಲ ಅವಾಂತರ ಆಯ್ತು ಎಂಬುದುನ್ನು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ. ಅದರ ವಿವರ ಇಲ್ಲಿದೆ ನೋಡಿ.
2018ರಲ್ಲಿ ಸಂತ್ರಸ್ತ ಯುವತಿ ಕಾಲೇಜುನಲ್ಲಿ ಓದುತ್ತಿರುವಾಗ ಆರೋಪಿ ಚಂದನ್​ನ ಪರಿಚಯವಾಗಿತ್ತು. ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಚಂದನ್​, ಯುವತಿ ಜತೆ ಮೂವರು ವರ್ಷಗಳಿಂದ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ್ದ. ಎರಡು ಬಾರಿ ಗರ್ಭಿಣಿಯಾದರೂ ಬಲವಂತವಾಗಿ ಅಬಾರ್ಷನ್​ ಮಾಡಿಸಿದ್ದ. ಅಲ್ಲದೆ ಮದುವೆಗಾಗಿ 5-6ರಿಂದ ಲಕ್ಷ ಹಣವನ್ನೂ ಪಡೆದಿದ್ದ. ಇದೀಗ ಮದುವೆ ಆಗಲ್ಲ ಎಂದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಚಂದನ್ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಸಾಕು ನಾಯಿಗೆ ಸೀಮಂತ! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಈ ದೃಶ್ಯ

ಟಾಯ್ಲೆಟ್​ನಲ್ಲಿ ಚಿರತೆ-ನಾಯಿ ಲಾಕ್: ನಾಯಿ ಎದುರಿಗಿದ್ರೂ ಚಿರತೆ ಫುಲ್ ಸೈಲೆಂಟ್‌! ಮುಂದೇನಾಯ್ತು?

ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ಅಪಘಾತಕ್ಕೀಡಾಯ್ತು ಗೋವಾ ಪ್ರವಾಸಕ್ಕೆ ಹೊರಟಿದ್ದ ಹುಬ್ಬಳ್ಳಿ ಮೆಡಿಕಲ್ ವಿದ್ಯಾರ್ಥಿಗಳ ಕಾರು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 − 9 =
Remember me
