ಬೆಂಗಳೂರು:ಹಿಂದು ಯುವತಿಯರು, ಮಹಿಳೆಯರು ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಲು ಸೂಚಿಸುವೆ. ಅಲ್ಲದೆ, ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗೆ ಪರಿಶೀಲಿಸುವುದಾಗಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.
ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದ ಹಿಂದುಪರ ಸಂಘಟನೆಗಳ ನಿಯೋಗದ ಮನವಿ ಸ್ವೀಕರಿಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಜತೆಗೆ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವವಹಿಸುತ್ತದೆ ಎಂದು ಹೇಳಿದರು.
ಕಳವಳರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೂ ಲವ್ ಜಿಹಾದ್ ಅವ್ಯಾಹತವಾಗಿ ನಡೆದಿದ್ದು, ಉತ್ತರಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ವಿರೋಧಿ ವಿಶೇಷ ದಳ ರಚಿಸಲು ಹಿಂದೂ ಜನಜಾಗೃತಿ ಸಮಿತಿ ಇನ್ನಿತರ ಸಂಘಟನೆಗಳು ಮನವಿ ಮಾಡಿದವು. ರಾಷ್ಟ್ರೀಯ ತನಿಖಾ ದಳದ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳ ಪ್ರಕಾರ ರಾಜ್ಯದ ಐದು ಜಿಲ್ಲೆಗಳಲ್ಲಿ ಶಾಹೀನ್ ಗ್ಯಾಂಗ್ ಸಕ್ರಿಯವಾಗಿದ್ದು, ಕೆಲವು ಮೌಲ್ವಿಗಳು ಹಾಗೂ ಮದರಸಾಗಳು ಲವ್ ಜಿಹಾದ್​ಗೆ ಸಾಥ್ ನೀಡಿವೆ ಎಂದು ಈ ಮನವಿಯಲ್ಲಿ ಕಳವಳ ವ್ಯಕ್ತಪಡಿಸಿವೆ.
ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ತಂಡದ ಭವ್ಯಾಗೌಡ, ದುರ್ಗಾಸೇನೆಯ ನಂದಿನಿ ನಾಗರಾಜ್, ಶ್ರೀರಾಮಸೇನೆಯ ಸುಂದರೇಶ್, ಅಮರನಾಥ್ ಇದ್ದರು.
ಕೇವಲ 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆದು ಹೊಸ ಇತಿಹಾಸ ಬರೆದ ಬಾಲಕ!

ರಾಜ್ಯ ಕಾಂಗ್ರೆಸ್​ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಜೆಡಿಎಸ್ ಮುಖಂಡನ ಮನೆಯಲ್ಲಿ ಹುಲಿ ಚರ್ಮ ಪತ್ತೆ: ಆರೋಪಿ ಸೇರಿ 4 ಹುಲಿ ಚರ್ಮದ ತುಂಡುಗಳು ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
