ಮಡಿಕೇರಿ: ಕಳೆದೊಂದು ದಶಕದಿಂದ ಲವ್ ಜಿಹಾದ್ ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ದೇಶದಾದ್ಯಂತ ಸಾಕಷ್ಟು ಪ್ರಕರಣ ನಡೆದಿದ್ದು, ರಾಜ್ಯದಲ್ಲಿ ಬುಡಸಮೇತ ಕಿತ್ತು ಹಾಕಲು ಸರ್ಕಾರ ಎಲ್ಲ ರೀತಿ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಪಿಡುಗಿನಿಂದ ಹಲವು ಯುವಕ, ಯುವತಿಯರ ಜೀವನ ನರಕವಾಗಿದೆ. ಮದುವೆ ಮೂಲಕ ಮತಾಂತರ ಮಾಡುವ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಅಮಾಯಕರು ಲವ್ ಜಿಹಾದ್‌ಗೆ ಬಲಿಯಾಗಬಾರದೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಳಕಳಿ ವ್ಯಕ್ತಪಡಿಸಿದರು.
ಮದುವೆ ಮೂಲಕ ಮತಾಂತರ ಮಾಡುವ ವಿಚಾರಕ್ಕೆ ಸಂಬಂಧಿಸಿದ್ದಂತೆ ಕಾನೂನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ಸಂವಿಧಾನದ ಚೌಕಟ್ಟಿ ನಲ್ಲಿ ಕಾನೂನು ರೂಪಿಸಲಾಗುವುದು. ಮುಖ್ಯಮಂತ್ರಿ ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದ್ದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಸಂಪತ್‌ರಾಜ್ ಬಂಧನಕ್ಕೆ ನಾಲ್ಕು ತಂಡ ರಚಿಸಲಾಗಿದ್ದು, ಶೀಘ್ರ ಆತನನ್ನು ಬಂಧಿಸಲಾಗುವುದೆಂದು ವಿಶ್ವಾಸ ವ್ಯಕ್ತ ಪಡಿಸಿದರು. ಕಾಂಗ್ರೆಸ್ ಸರ್ಕಾರ ಇದ್ದಾಗ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ನಡೆದಿದೆ. ಈ ಕೊಲೆಗೆ ಸಂಬಂಧಿಸಿದ್ದಂತೆ ಸಾರ್ವಜನಿಕರಲ್ಲಿ ಸಾಕಷ್ಟು ಪ್ರಶ್ನೆ ಇದೆ. ಸಿಬಿಐ ಕಾನೂನಿನ್ವಯ ಕ್ರಮ ತೆಗೆದುಕೊಳ್ಳುತ್ತಿದೆ. ಇಲ್ಲಿ ರಾಜಕೀಯ ಅಂಶ ಕಾಣುತ್ತಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಪಕ್ಷ ತೊರೆಯುತ್ತಿರುವ ಹತಾಶೆಯಿಂದ ಸಿದ್ದರಾಮಯ್ಯ ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಂದಿನ ಮೂರು ವರ್ಷ ಮುಖ್ಯಮಂತ್ರಿಯಾಗಿ ಆಳ್ವಿಕೆ ನಡೆಸಲಿದ್ದಾರೆಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
