ಕೊಳ್ಳೇಗಾಲ: 5 ತಿಂಗಳ ಹಿಂದಷ್ಟೇ ಪ್ರೇಮಿಗಳಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಮದುವೆಯಾಗಿದ್ದ ಇವರು ಮೂರು ತಿಂಗಳ ಬಳಿಕ ದೇವಸ್ಥಾನದಲ್ಲಿ ಹಸಮಣೆ ಏರಿದ್ದರು. ಇದಾದ ಎರಡೇ ತಿಂಗಳಿಗೆ ನವವಿವಾಹಿತೆ ನಾಪತ್ತೆಯಾಗಿದ್ದಾಳೆ!
ಇಂತಹ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ಸಂಭವಿಸಿದ್ದು, ಪತ್ನಿ ಇಲ್ಲದೆ ಕಂಗಾಲಾದ ಶಿವಕುಮಾರ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪತ್ನಿ ಸೌಂದರ್ಯ(23) ಕಾಣೆಯಾಗಿದ್ದು, ಈ ಬಗ್ಗೆ ಶುಕ್ರವಾರ ದೂರು ದಾಖಲಿಸಿದ್ದಾರೆ.ಇದನ್ನೂ ಓದಿರಿನನ್ನ ಮನೆಗೆ ನುಗ್ಗಿ ಬಲವಂತವಾಗಿ ಮಗಳಿಗೆ ತಾಳಿ ಕಟ್ಟೇಬಿಟ್ಟ: ಪ್ಲೀಸ್​.. ನನ್ನ ಮಗಳನ್ನು ಕಾಪಾಡಿ…
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ಸೌಂದರ್ಯ ಈ ಹಿಂದೆ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗ ಗುಂಡೇಗಾಲ ಗ್ರಾಮದ ಶಿವಕುಮಾರ್​ಗೂ ಸೌಂದರ್ಯ ನಡುವೆ ಪರಿಚಯವಾಗಿ ನಂತರ ಪ್ರೇಮಾಂಕುರವಾಗಿತ್ತು. 2020ರ ಆ.17ರಂದು ಪಟ್ಟಣದ ಉಪನೋಂದಣಾಧಿಕಾರಿ ಕಚೇರಿ ಹಾಗೂ ನ.26ರಂದು ತಾಲೂಕಿನ ಉಗನೀಯ ಗ್ರಾಮದ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಶಿವಕುಮಾರ್-ಸೌಂದರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರೂ ಗುಂಡೇಗಾಲದಲ್ಲಿ ಸಂಸಾರ ನಡೆಸುತ್ತಿದ್ದರು.
ಜ.19ರಂದು ಬೆಳಗ್ಗೆ ಸೌಂದರ್ಯ ಬಟ್ಟೆ, ಚಿನ್ನಾಭರಣದ ಸಮೇತ ನಾಪತ್ತೆಯಾಗಿದ್ದಾರೆ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ. ಸೌಂದರ್ಯ ಎಲ್ಲಿದ್ದಾಳೆ? ಆಕೆ ಗಂಡನನ್ನು ಬಿಟ್ಟು ಹೋಗಲು ಕಾರಣ ಏನು? ಅವಳಿಗೆ ಏನಾಗಿದೆ?… ಎಂಬೆಲ್ಲಾ ಪ್ರಶ್ನೆಗಳಿಗೆ ತನಿಖೆ ಬಳಿಕ ಉತ್ತರ ಸಿಗಲಿದೆ.
ಕಾಲೇಜು ಯುವತಿಯ ಬೆತ್ತಲೆ ಫೋಟೋ ಸ್ನೇಹಿತರ ಕೈಯಲ್ಲಿ! ಮುಂದೆ ನಡೆದೇ ಹೋಯ್ತು ಅವಾಂತರ…

ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ನನ್ನ ಮನೆಗೆ ನುಗ್ಗಿ ಬಲವಂತವಾಗಿ ಮಗಳಿಗೆ ತಾಳಿ ಕಟ್ಟೇಬಿಟ್ಟ: ಪ್ಲೀಸ್​.. ನನ್ನ ಮಗಳನ್ನು ಕಾಪಾಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
