ಬೆಂಗಳೂರು:ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿರುವ ಘಟನೆ ಬಾಗಲಗುಂಟೆಯ ಮಂಜುನಾಥ್ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿ ಉದಯ್ ಎಂಬಾತ, ಇಂದು ಯುವತಿ ಕಾಲೇಜಿಗೆ ಹೋಗುವಾಗ ಅಡ್ಡಗಟ್ಟಿದ್ದಾನೆ. ಈ ವೇಳೆ ತಾನು ತಂದಿದ್ದ ಚಾಕುವಿನಿಂದ ಯುವತಿ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ. ಯುವತಿ ಕೊಲೆಗೆ ಯತ್ನಿಸಿ, ನಂತರ ತಾನೂ ಗೋಡೆಗೆ ತಲೆ ಚಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಾನೆ.
ಒಂದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ:
ಪಾಗಲ್ ಪ್ರೇಮಿ ಉದಯ್ ಮತ್ತು ಯುವತಿ ರಾಜಾಜಿನಗರದ ಒಂದೇ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಬಳಿಕ ಪ್ರತ್ಯೇಕ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ಮೂರು ವರ್ಷದಿಂದ ಯುವತಿ ಜೊತೆ ಫ್ರೆಂಡ್ ಶಿಪ್ ಹೊಂದಿದ್ದ ಉದಯ್‌, ಇತ್ತೀಚೆಗೆ ಲವ್ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಯುವತಿ ಪಾಗಲ್ ಪ್ರೇಮಿಯ ಪ್ರೀತಿಯನ್ನು ನಿರಾಕರಿಸಿದ್ದಳು.
ಈ ಹಿನ್ನೆಲೆ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ್ದ ಉದಯ್, ಮಾರಣಾಂತಿಕ‌ ಹಲ್ಲೆ ನಡೆಸಿ ಉದಯ್ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತ ಟಿ-20 ವಿಶ್ವಕಪ್ ಗೆಲ್ಲಬೇಕಾದರೆ ಈ ಸ್ಫೋಟಕ ಅಲ್ರೌಂಡರ್ ಪಾತ್ರವೇ ಪ್ರಮುಖ: ದಿನೇಶ್ ಕಾರ್ತಿಕ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
