ಮೈಸೂರು:ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ದುಗ್ಗಹಳ್ಳಿ ಗ್ರಾಮದ ಕಾವ್ಯಾ ಮತ್ತು ಕುರಿಹುಂಡಿ ಗ್ರಾಮದ ರವಿ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅಂತರ್ಜಾತಿ ಎಂಬ ಕಾರಣಕ್ಕೆ ಎರಡು ಕುಟುಂಬದಿಂದ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಸಾವಿಗೆ ಶರಣಾಗಲು ಮುಂದಾಗಿದ್ದಾರೆ.
ಇದನ್ನೂ ಓದಿ:VIDEO| ರಸ್ತೆ ಅಗಲೀಕರಣಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿ ಚಾಲಕನ ಮೇಲೆ ಹಲ್ಲೆ ಮಾಡಿದ ಮಾಜಿ ಶಾಸಕ
ಕಾವ್ಯಾ ಮನೆಯಲ್ಲಿ ಯಾರು ಇಲ್ಲದ ವೇಳೆ ಇಂದು ಬೆಳಗ್ಗೆ ರವಿ ದುಗ್ಗಹಳ್ಳಿಗೆ ಆಗಮಿಸಿದ್ದಾನೆ. ಇಬ್ಬರು ಮನೆಯ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೇಗೋ ಮಾಹಿತಿ ತಿಳಿದು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪಿಎಸ್ಐ ಸುರೇಂದ್ರ ಮತ್ತು ಸಿಬ್ಬಂದಿ ರಕ್ತಸ್ರಾವದಿಂದ ನರಳುತ್ತಿದ್ದ ಪ್ರೇಮಿಗಳನ್ನು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಭಾರತ-ಅಮೆರಿಕ ಆಯುರ್ವೇದ ವೈದ್ಯರಿಂದ ಜಂಟಿಯಾಗಿ ಕೋವಿಡ್​-19 ಔಷಧ ಪರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 18 =
Remember me
