ರಾಯಚೂರು:ಪತ್ನಿ ಇಲ್ಲದ ವೇಳೆ ಮನೆಗೆ ಪ್ರೇಯಸಿಯನ್ನು ಕರೆತಂದಿದ್ದ ವ್ಯಕ್ತಿಯೊಬ್ಬ ಆಕೆಯೊಂದಿಗೆ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ಹೇಮನೂರು ಗ್ರಾಮದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಹೇಮನೂರು ಗ್ರಾಮದ ರಂಗಣ್ಣ(30) ಮತ್ತು ದೇವದುರ್ಗ ಪಟ್ಟಣದ ಯುವತಿ ಮೃತರು. ರಂಗಣ್ಣನಿಗೆ 6 ವರ್ಷದ ಹಿಂದೆಯೇ ಬೇರೊಬ್ಬಳೊಂದಿಗೆ ಮದುವೆ ಆಗಿದೆ. ಆದರೂ ದೇವದುರ್ಗ ಪಟ್ಟಣದ ವಿವಾಹಿತ ಯುವತಿಯೊಂದಿಗೆ ರಂಗಣ್ಣ ಅಕ್ರಮ ಸಂಬಂಧ ಹೊಂದಿದ್ದ. ಹೆಂಡತಿಯನ್ನು ಕೊತ್ತದೊಡ್ಡಿ ಜಾತ್ರೆಗೆ ಕಳುಹಿಸಿದ್ದ ಆತ, ತನ್ನ ಪ್ರೇಯಸಿಯನ್ನ ಮನೆಗೆ ಕರೆತಂದಿದ್ದ. ಆ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ.ಇದನ್ನೂ ಓದಿರಿಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ
ಮದುವೆಯಾಗಿ ಆರು ವರ್ಷವಾದರೂ ರಂಗಣ್ಣನಾಯಕ್​ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ನಡುವೆ ದೇವದುರ್ಗ ಪಟ್ಟಣದ ಯುವತಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಇವರಿಬ್ಬರೂ ಮನೆ ಕೋಣೆಯಲ್ಲಿ ದುರಂತ ಅಂತ್ಯಕಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತಳ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ದೇವದುರ್ಗ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 8 =
Remember me
