ಚಾಮರಾಜನಗರ:ನರ್ಸ್​ ಹಾಗೂ ಡ್ರೈವರ್​ ನಡುವಿನ ಪ್ರೇಮ ದುರಂತ ಅಂತ್ಯ ಕಂಡಿದೆ. ಈ ಪ್ರೇಮಿಗಳಿಬ್ಬರು ಕಾರೊಳಗೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ತೇರಂಬಳ್ಳಿ ಕೆರೆ ಬಳಿ ಈ ಘಟನೆ ನಡೆದಿದೆ.
ಯಳಂದೂರು ತಾಲ್ಲೂಕು ಮಾಂಬಳ್ಳಿ ಗ್ರಾಮದ ಕಾಂಚನಾ (20) ಹಾಗೂ ಶ್ರೀನಿವಾಸ್ (26) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಶ್ರೀನಿವಾಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.
ಅಕ್ಕಪಕ್ಕದ ಮನೆಯಲ್ಲಿ ವಾಸ ಮಾಡುತ್ತಿದ್ದ ಕಾಂಚನ ಮತ್ತು ಶ್ರೀನಿವಾಸ್ ಮಧ್ಯೆ ಪ್ರೇಮಾಂಕುರವಾಗಿದ್ದು, ಇಬ್ಬರು ಮದುವೆಯಾಗಲು ಬಯಸಿದ್ದರೂ ಮನೆಯವರ ವಿರೋಧ ಎದುರಾಗಿತ್ತು. ಇದರಿಂದ ಬೇಸತ್ತಿದ್ದ ಇವರು ಕಾರಿನಲ್ಲಿ ಕುಳಿತು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್​ಪಿ ಹಾಗೂ ಎಎಸ್​​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 5 =
Remember me
