ಬೆಂಗಳೂರು:ಲೋಕಸಭೆ ಚುನಾವಣೆ ಹಾಗೂ ಪರಿಷತ್ ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಮುಖ್ಯ ಚುನಾವಣಾಧಿಕಾರಿಗಳು ಈಗ ಅಧಿಕಾರಿಗಳ ಸಭೆ, ವಿಡಿಯೋ ಸಂವಾದಕ್ಕೂ ನಿರ್ಬಂಧ ಹೇರಿದ್ದಾರೆ.
ಸುದೀರ್ಘ ಅವಧಿಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜ್ಯ ಸರ್ಕಾದ ದಿನ ನಿತ್ಯದ ಕಾರ್ಯಗಳಿಗೂ ನೀತಿ ಸಂಹಿತೆಯ ಅಡಚಣಿ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ತುರ್ತು ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ನೀತಿ ಸಂಹಿತೆಯಿಂದ ವಿನಾಯಿತಿ ಕೋರಿ ಸರ್ಕಾದ ವಿವಿಧ ಸಚಿವರು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಕೆಲವು ದೈನಂದಿನ ಸಭೆಗಳನ್ನು ಮಾಡಲು ಚುನಾವಣಾ ಆಯೋಗ ವಿನಾಯಿತಿ ನೀಡಿತ್ತು. ಆದರೆ ಈಗ ಉನ್ನತಾಧಿಕಾರಿಗಳ ವೀಡಿಯೋ ಸಂವಾದ, ಸಭೆಗಳಿಗೂ ಕಡಿವಾಣ ಹಾಕಿದೆ.
ಜೂ.4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಈ ಮತ ಎಣೆಕೆ ಕಾರ್ಯದ ಪೂರ್ವ ಸಿದ್ಧತಾ ಕಾರ್ಯಗಳು ಹಾಗೂ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳು ಪ್ರಗತಿಯಲ್ಲಿವೆ. ಈ ಸಂಬಂಧ ಮಾದರಿ ನೀತಿ ಸಂಹಿತೆ ಜೂ.6ರ ವರೆಗೆ ಜಾರಿಯಲ್ಲಿದೆ. ಈ ಹಂತದಲ್ಲಿ ಕೆಲವು ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳು ವಿವಿಧ ವಿಷಯಗಳಗೆ ಸಂಬಂಧಿಸಿದಂತೆ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ವಿಡಿಯೋ ಸಂವಾದ ಏರ್ಪಡಿಸುತ್ತಿದ್ದಾರೆ. ಇದರಿಂದಾಗಿ ಲೋಕ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ನಿರ್ವಹಿಸಲು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣಾ ಕಾರ್ಯಗಳಗೆ ಅಡಚಣೆಯುಂಟಾಗುತ್ತಿದೆ. ಅದ್ದರಿಂದ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣಾ ಕಾರ್ಯ ಮುಕ್ತಾಯಗೊಳ್ಳುವವರೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ವಿಡಿಯೋ ಸಂವಾದಗಳನ್ನು ನಡೆಸಬಾರದೆಂದು ಹೇಳಿದ್ದಾರೆ.
ಈಗಾಗಲೇ ಸಭೆ ಮತ್ತು ವೀಡಿಯೋ ಸಂವಾದಗಳು ನಿಗದಿಯಾಗಿದಲ್ಲಿ ಮುಂದೂಡಲು ಅಗತ್ಯ ಕ್ರಮಕೈಗೊಳ್ಳಬೇಕು. ಒಂದು ವೇಳೆ ಸಭೆ/ವಿಡಿಯೋ ಸಂವಾದವನ್ನು ನಡೆಸಬೇಕಾದ ತುರ್ತು ಅಗತ್ಯವಿದ್ದಲ್ಲಿ ಈ ಕಚೇರಿಯೊಂದಿಗೆ ಸಮಾಲೋಚಿಸುವಂತೆ ಎಲ್ಲ ಇಲಾಖೆಗಳಗೆ ನಿರ್ದೇಶಿಸಬೇಕುಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಅವರನ್ನು ಕೋರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 5 =
Remember me
