ಉತ್ತರಕನ್ನಡ:ಎದುರಿದ್ದ ವಾಹನ ಕೆಟ್ಟು ನಿಂತಿದ್ದು, ಹಿಂದಿನಿಂದ ಬರುತ್ತಿದ್ದ ವಾಹನವೊಂದು ಅದಕ್ಕೆ ಡಿಕ್ಕಿ ಹೊಡೆದು ಒಬ್ಬ ಸಾವಿಗೀಡಾಗಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಮಿರ್ಜಾನ್ ಬಳಿ ಈ ಅಪಘಾತ ಸಂಭವಿಸಿದೆ. ಈ ದಾರಿಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಧಾರವಾಡದಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಲಗೇಜ್ ಕ್ಯಾರಿಯರ್ ವಾಹನ ಈ ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತಗೊಂಡ ತೀವ್ರತೆಗೆ ಲಗೇಜ್ ಕ್ಯಾರಿಯರ್ ವಾಹನದಲ್ಲಿದ್ದ ಸಹಾಯಕ, ಧಾರವಾಡ ಮೂಲದ ಇಸ್ಮಾಯಿಲ್ ರೋಣದ್ ಸಾವಿಗೀಡಾಗಿದ್ದಾನೆ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಗೇಜ್ ಕ್ಯಾರಿಯರ್​​ನಲ್ಲಿ ಬಿಸಿಎಮ್ ಹಾಸ್ಟೆಲ್ ಆಹಾರ ಸಾಮಗ್ರಿ ಸಾಗಿಸಲಾಗುತ್ತಿತ್ತು, ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌‌
ಖ್ಯಾತ ಗಾಯಕನ ಆಸ್ತಿಯೇ ಒತ್ತುವರಿ; ಭೂಮಾಫಿಯಾಗೆ ಕೈಜೋಡಿಸಿದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ!?

ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
