ಬೆಂಗಳೂರು:ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.
ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾ ವಣೆಯ ಪೂರ್ವ ಸಿದ್ಧತೆಯ ಕುರಿತು ಮುಖ್ಯ ಚುನಾವಣಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಈ ಸೂಚನೆ ನೀಡಿದರು.
ಮತದಾರರಿಗೆ ಮದ್ಯ ಸೇರಿ ವಿವಿಧ ರೀತಿಯ ಉಡುಗೂರೆ, ಆಮಿಷಗಳನ್ನು ಕೂಪನ್​ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತಾರಾಜ್ಯ ಚೆಕ್ ಪೋಸ್ಟ್ ಗಳನ್ನು ತೆರೆಯಬೇಕು ಎಂದು ನಿರ್ದೇಶನ ನೀಡಿದರು. ಆಮಿಷಗಳ ಬಗ್ಗೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ್ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳಬೇಕು. ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು ಎಂದು ತಾಕೀತು ಮಾಡಿದರು.
ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು. ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ವಿಶೇಷ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು. ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್​ಫಾಮರ್್​ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಮಾಜಘಾತುಕ ಭಾಷಣ/ ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ), ಅಬಕಾರಿ ಇಲಾಖೆ ಆಯುಕ್ತರು, ವಾಣಿಜ್ಯ ಇಲಾಖೆ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಮಿತಭಾಷಿ ನಿರ್ಮಲಾ: ಬಜೆಟ್​ ಮಂಡನೆಯಲ್ಲಿ ಕ್ರಮೇಣ ಕಡಿಮೆಯಾದ ಮಾತು; ಯಾವಾಗ ಎಷ್ಟು ಮಾತು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
