ದಾವಣಗೆರೆ:ಇಹಲೋಕ ತ್ಯಜಿಸಿದ ಚಿಂತಕ, ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿಯವರ ಅಂತ್ಯಕ್ರಿಯೆಯನ್ನು ಹುಟ್ಟೂರಲ್ಲೇ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ವ್ಯಕ್ತವಾಗುತ್ತಿದೆ.
ಹುಟ್ಟೂರಾದ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲೇ ನಡೆಸಬೇಕೆಂಬುದು ಗ್ರಾಮಸ್ಥರು ಹಾಗೂ ಶಾಲಾ-ಕಾಲೇಜು ವಿಧ್ಯಾರ್ಥಿಗಳ ಆಗ್ರಹವಾಗಿದೆ. ಹೀಗಾಗಿ ಕೋಗಲೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಸ್ಥಾನದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ, ತನ್ನ ಅಂತಿಮ ಸಂಸ್ಕಾರವನ್ನು ಹಂಪಿಯಲ್ಲಿ ನಡೆಸಬೇಕೆಂಬುದು ಚಿಮೂ ಅವರ ಆಸೆಯಾಗಿತ್ತಂತೆ. ಹೀಗೆಂದು ಅವರ ಪುತ್ರ ವಿನಯಕಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಲ್ಲದೆ, ತಂದೆಯವರ ದೇಹ ದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಮೋನಿಯ ಕಾಯಿಲೆಯಿಂದ ಬಳಲುತ್ತಿದ್ದ ಚಿಮೂ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
