ಬೆಂಗಳೂರು:ಚಿತಂಕ, ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎಚ್​.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಂಪಿ ಸ್ಮಾರಕಗಳ ಉಳಿವಿಗಾಗಿ ಹೋರಾಡಿದ್ದನ್ನು ನೆನಪಿಸಿ ಟ್ವೀಟ್​ ಮಾಡಿರುವ ಸಿಎಂ ಬಿಎಸ್​ವೈ, ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ.
ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ.#RIPChidanandaMurthipic.twitter.com/PlNINCGeDI— B.S.Yediyurappa (@BSYBJP)January 11, 2020
ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ.#RIPChidanandaMurthipic.twitter.com/PlNINCGeDI
ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆಹಿರಿಯ ಸಂಶೋಧಕ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ ‘ಚಿಮೂ’ ಎಂದೇ ಖ್ಯಾತರಾಗಿದ್ದ ಹಿರಿಯ ಜೀವ, ನಾಡು-ನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು. ಮೃತರ ಕುಟುಂಬ ಸದಸ್ಯರಿಗೆ, ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಮಾಜಿ ಎಚ್​ಡಿಕೆ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ 'ಚಿಮೂ'ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು.ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿpic.twitter.com/NMHadTXwwZ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)January 11, 2020
ಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ 'ಚಿಮೂ'ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು.ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿpic.twitter.com/NMHadTXwwZ
ನಿಧನದ ಸುದ್ದಿ ತಿಳಿದು ದು:ಖವಾಯಿತುಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಂತ್ವಾನ ಹೇಳಿದ್ದಾರೆ.
ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು.pic.twitter.com/VDFzUwiekx— Siddaramaiah (@siddaramaiah)January 11, 2020
ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು.pic.twitter.com/VDFzUwiekx
ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಶಿಕ್ಷಣ ಸಚಿವ ಸುರೇಶ್​​ ಕುಮಾರ್​ ಅವರು ಸಂತಾಪ ಕೋರಿದ್ದಾರೆ.
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ.‌pic.twitter.com/D1rViTsAns— S.Suresh Kumar (@nimmasuresh)January 11, 2020
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ.‌pic.twitter.com/D1rViTsAns
ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಚಿದಾನಂದ ಮೂರ್ತಿ(88)ಯವರನ್ನು ಚಂದ್ರಲೇಔಟ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಿದಾನಂದ ಅವರು 1931ರ ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಲೂರಿನಲ್ಲಿ ಜನಿಸಿದರು. ಹಂಪಿ ಸ್ಮಾರಕಗಳ ಉಳಿವಿಗಾಗಿ ಹೋರಾಡಿದ್ದರು. ಕನ್ನಡದ ಲೇಖಕ, ವಿದ್ವಾಂಸಕ, ಸಂಶೋಧಕ, ಇತಿಹಾಸಜ್ಞ ಹಾಗೂ ಪ್ರಾಧ್ಯಾಪಕರಾಗಿಯೂ ಡಾ.ಚಿದಾನಂದ ಮೂರ್ತಿ ಅವರು ಸೇವೆ ಸಲ್ಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
