ಬೆಂಗಳೂರು:ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಂಶೋಧಕ ಡಾ. ಚಿದಾನಂದ ಮೂರ್ತಿ(88) ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿದಾನಂದ ಅವರು ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚಂದ್ರಲೇಔಟ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಿದಾನಂದ ಅವರು 1931ರ ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಲೂರಿನಲ್ಲಿ ಜನಿಸಿದರು. ಹಂಪಿ ಸ್ಮಾರಕಗಳ ಉಳಿವಿಗಾಗಿ ಹೋರಾಡಿದ್ದರು. ಕನ್ನಡದ ಲೇಖಕ, ವಿದ್ವಾಂಸಕ, ಸಂಶೋಧಕ, ಇತಿಹಾಸಜ್ಞ ಹಾಗೂ ಪ್ರಾಧ್ಯಾಪಕರಾಗಿಯೂ ಡಾ.ಚಿದಾನಂದ ಮೂರ್ತಿ ಅವರು ಸೇವೆ ಸಲ್ಲಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 20 =
Remember me
