ಬೆಂಗಳೂರು ದಕ್ಷಿಣ:ಪ್ರತಿ ನಿತ್ಯ ಕ್ಷೇತ್ರದ ಮತದಾರರ ಜತೆ ಒಡನಾಟ ಹೊಂದಿದ್ದೇನೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿಸಿದರೆ ಅಭಿವೃದ್ದಿ ಸಾಧ್ಯವಿಲ್ಲ, ಅಭಿವೃದ್ದಿಗೆ ಬಿಜೆಪಿಯೇ ಭರವಸೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಸಂತಪುರ ವಾರ್ಡ್​ನ ವಲ್ಲಭರಾಯಸ್ವಾಮಿಯ ಆಶೀರ್ವಾದ ಪಡೆದು ಅಪಾರ ಪ್ರಮಾಣದ ಬೆಂಬಲಿಗರ ಜತೆ ತೆರೆದ ವಾಹನದಲ್ಲಿ ಮತಯಾಚನೆ ವೇಳೆ ಮಾತನಾಡಿದರು. ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆಯಿದ್ದು, ಜನರಿಗೆ ಭದ್ರತೆ, ಶಾಂತಿ ಮತ್ತು ಅಭಿವೃದ್ಧಿ ಒದಗಿಸುವ ಏಕೈಕ ಪಕ್ಷ ಬಿಜೆಪಿಯಾಗಿದೆ, ಜನ ವಿರೋಧಿ ಪಕ್ಷಗಳನ್ನು ಸೋಲಿಸಿ, ಜನಪರವಾದ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಇದನ್ನೂ ಓದಿ:ಪೀಣ್ಯ ಕೈಗಾರಿಕಾ ಸಮಸ್ಯೆಗೆ ಪರಿಹಾರ: ಪೀಣ್ಯ ಕೈಗಾರಿಕಾ ಸಂಘದ ಜತೆ ಆರ್. ಮಂಜುನಾಥ್ ಸಂವಾದ
ಕರೊನಾ ಮಹಾಮಾರಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯುಂಟಾಗಿತ್ತು, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೆ ಶೇ.80 ಅಭಿವೃದ್ದಿ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಮೂಲಭೂತ ಸೌಲಭ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಯಾರೇ ಸಮಸ್ಯೆ ಎಂದು ಬಂದರೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕರ್ತರ ಹಾಗೂ ಬೆಂಬಲಿಗರ ಹಷೋದ್ದಾರ, ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಮತ್ತು ಅಶೋಕ್ ಪರ ಜೈಕಾರ ಮುಗಿಲು ಮುಟ್ಟಿತ್ತು. ಸುಡು ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರು ಹೆಜ್ಜೆ ಹಾಕಿದರು.
ಎಂ. ಕೃಷ್ಣಪ್ಪ ಮಂತ್ರಿಯಾಗುತ್ತಾರೆ; ಬಿಜೆಪಿ ಯುವ ಮುಖಂಡ ಸುಪ್ರೀತ್​ ಭವಿಷ್ಯ

ಎಂ. ಕೃಷ್ಣಪ್ಪ ಪಾದಯಾತ್ರೆ; ಬೆಂಗಳೂರು ದಕ್ಷಿಣದಲ್ಲಿ ಮತ್ತೊಮ್ಮೆ ಗೆಲುವಿನ ವಿಶ್ವಾಸ

ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
