ಬೆಂಗಳೂರು ದಕ್ಷಿಣ:ಚುನಾವಣೆಗಾಗಿ ಕ್ಷೇತ್ರ ಸಂಚಾರ ನಡೆಸುತ್ತಿಲ್ಲ. ಶಾಸಕನಾಗಿ ನಿರಂತರವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ, ಮುಖಂಡರು ಹಾಗೂ ಕಾರ್ಯಕರ್ತರ ಪ್ರೀತಿ, ವಿಶ್ವಾಸ ಸ್ವೀಕರಿಸಲು ಕ್ಷೇತ್ರ ವ್ಯಾಪ್ತಿ ಸಂಚರಿಸುತ್ತಿದ್ದೇನೆ ಎಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ತಿಳಿಸಿದ್ದಾರೆ.
ಆರ್.ಬಿ.ಐ. ಲೇಔಟ್‌ನಲ್ಲಿ ಆಯೋಜಿಸಿದ್ದ ಪಕ್ಷ ಸಂಘಟನೆ ಹಾಗೂ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಿಂಗಸಂದ್ರ ವಾರ್ಡ್‌ನ ಹಲವೆಡೆ ಪಾದಯಾತ್ರೆಯ ಮೂಲಕ ಮತಯಾಚನೆ ನಡೆಸಿದರು. ಕೊಪ್ಪದಲ್ಲಿ ಮತಯಾಚನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ, ಗೊಟ್ಟಿಗೆರೆ ವಾರ್ಡ್‌ನ ಮುಖಂಡರು ಹಾಗೂ ಕಾರ್ಯಕರ್ತರು ಜನ ಸಭೆ ನಡೆಸಲಾಗಿದೆ ಎಂದರು. ಮತಯಾಚನೆ ವೇಳೆಯಲ್ಲಿ ಜನರು ಅತ್ಯಂತ ಪ್ರೀತಿ, ವಿಶ್ವಾಸದಿಂದ ಬರಮಾಡಿಕೊಂಡು ಅಭೂತಪೂರ್ವ ಸ್ವಾಗತ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ನಮ್ಮ ಕ್ಷೇತ್ರದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಪ್ರತಿಯೊಬ್ಬರಿಗೂ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿ ತಿಳಿದಿದೆ. ದೇಶದ ರಕ್ಷಣೆಗಾಗಿ, ರಾಜ್ಯದ ಅಭಿ ವೃದ್ಧಿಗಾಗಿ ಬಿಜೆಪಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದರು.
ಬಿಜೆಪಿ ಮುಖಂಡರಾದ ಧರ್ಮೇಂದ್ರ ಪಂಚಾಲಿ, ಟಿ. ನಾರಾಯಣ್, ಗೊಟ್ಟಿಗೆರೆ ವಾರ್ಡ್ ಯುವಮುಖಂಡ ವಿನಯ್‌ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
