ಬೆಂಗಳೂರು ದಕ್ಷಿಣ:ಕ್ಷೇತ್ರ ವ್ಯಾಪ್ತಿಯ ದೊಡ್ಡ ತೋಗೂರು ಗ್ರಾಪಂ ಭಾಗದ ವಿಪ್ರೋ ಗೇಟ್ ನೀಲಾದ್ರಿನಗರ, ಇನ್ವೆಸ್ಟ್‌ಮೆಂಟ್ ಲೇಔಟ್ ಮತ್ತು ಕೋನಪ್ಪನ ಅಗ್ರಹಾರ ಪಂಚಾಯಿತ್ತಿಯ ಗೋವಿಂದಶೆಟ್ಟಿ ಪಾಳ್ಯ, ಕೃಷ್ಣಾರೆಡ್ಡಿ ಲೇಔಟ್, ದೊಡ್ಡ ನಾಗಮಂಗಲ ಹಾಗೂ ನಾಗನಾಥಪುರ ವಾರ್ಡ್‌ನ ಪರಪ್ಪನ ಅಗ್ರಹಾರ, ಕೆಂಪೇಗೌಡ ಸರ್ಕಲ್‌ನ ಪ್ರಮುಖ ರಸ್ತೆ ಗಳಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ರೋಡ್ ಶೋ ನಡೆಸಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ ಕೃಷ್ಣಪ್ಪ ಜತೆಯಾದ ನೂರಾರು ನಾಗರಿಕರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಜತೆಗೂಡಿ ಜೈಕಾರ ಹಾಕುತ್ತ ಬೆಂಬಲ ವ್ಯಕ್ತಪಡಿಸಿದರು.
ಇದನ್ನೂ ಓದಿ:ಯಶವಂತಪುರ ನಂ.1 ಕ್ಷೇತ್ರವಾಗಿಸುವೆ: ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿಕೆ
ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ಹೊಸ ಪರ್ವವೇ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಬಹುಮತದ ಬಿಜೆಪಿ ಸರ್ಕಾರ ಬರಲಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತೇವೆ, ಅತಿ ಹೆಚ್ಚಿನ ಮತಗಳಿಂದ ಜಯಶೀಲರನ್ನಾಗಿ ಮಾಡುವ ಮೂಲಕ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದ್ದೇವೆ ಎಂದು ನಾಗರಿಕರು ಕೂಗುತ್ತಿದ್ದ ದೃಶ್ಯ ಕಂಡುಬಂತು.
ರೋಡ್ ಶೋನಲ್ಲಿ ಮಾಜಿ ಜಿಪಂ- ತಾಪಂ ಸದಸ್ಯರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರಿದ್ದರು.
ಜನಪರವಾಗಿರುವ ಬಿಜೆಪಿಗೆ ಈ ಬಾರಿ ಕೃಷ್ಣ ಜನಾದೇಶ ಕೊಡುವ ಮೂಲಕ ಬೆಂಗಳೂರು ಮತ್ತು ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಜತೆಯಾಗಿ ನಿಲ್ಲಲು ಕ್ಷೇತ್ರದ ಮತದಾರರು ತೀರ್ಮಾನಿಸಿದ್ದಾರೆ.
| ಎಂ. ಕೃಷ್ಣಪ್ಪ ಬಿಜೆಪಿ ಅಭ್ಯರ್ಥಿ
ಗಾಯತ್ರಿ ಮಿಂಚಿನ ಸಂಚಾರ: ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಮತಯಾಚನೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆ: ಎಂ.ಕೃಷ್ಣಪ್ಪ ಪ್ರತಿಪಾದನೆ

ಎಂ. ಕೃಷ್ಣಪ್ಪ ಮಂತ್ರಿಯಾಗುತ್ತಾರೆ; ಬಿಜೆಪಿ ಯುವ ಮುಖಂಡ ಸುಪ್ರೀತ್​ ಭವಿಷ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 5 =
Remember me
