ಬೆಳಗಾವಿ:ಇಲ್ಲಿನ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಸೋಮವಾರ ಕರೊನಾ ಸೋಂಕು ದೃಢವಾಗಿದೆ. ಯಾವುದೇ ರೋಗ ಲಕ್ಷಣವಿಲ್ಲದೆ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್​ ಆಗಿರುವುದಾಗಿ ತಿಳಿಸಲಾಗಿದೆ.
ಈ ವಿಚಾರವಾಗಿ ಅವರು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್​ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಅವರ ಜತೆ ಸಂಪರ್ಕದಲ್ಲಿದ್ದವರಿಗೆ ಕರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.
ಕಳೆದ ವರ್ಷ ಮಂಗಳಾ ಅವರ ಪತಿ, ಕೇಂದ್ರ ಸಚಿವ ಸುರೇಶ್​ ಅಂಗಡಿಯವರು ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ಕರೊನಾ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದರು. ಅದಾದ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ಖಾಲಿ ಉಳಿದಿತ್ತು. ಇತ್ತೀಚೆಗಷ್ಟೇ ಕ್ಷೇತ್ರದ ಚುನಾವಣೆ ನಡೆದಿದ್ದು, ಅದರಲ್ಲಿ ಮಂಗಳಾ ಬಿಜೆಪಿ ಪರವಾಗಿ ಕಣಕ್ಕಿಳಿದಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. (ಏಜೆನ್ಸೀಸ್​)
19 ವರ್ಷದ ಮಗಳ ಹೆಣವನ್ನು ಬೈಕ್​ನಲ್ಲೇ ಹೊತ್ತೊಯ್ದ ಅಪ್ಪ! ಕಣ್ಣೀರು ತರಿಸುತ್ತೆ ಈ ತಂದೆಯ ಕಥೆ
ಒಂದೇ ಆ್ಯಂಬುಲೆನ್ಸ್​ನೊಳಗೆ 22 ಕರೊನಾ ಸೋಂಕಿತರ ಹೆಣ! ವಿಡಿಯೋ ಮಾಡಲು ಬಿಡದೆ ಮೊಬೈಲ್​ ಕಿತ್ತುಕೊಂಡ ಪೊಲೀಸರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
