ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!ಕಾರಣವಿಷ್ಟೇ; ಕಾಂಗ್ರೆಸ್ ಸರ್ಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ.ಇದು ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ವ್ಯಂಗ್ಯವಾಡಿದ್ದಾರೆ.
ಖೊಟ್ಟಿ ಗ್ಯಾಟಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಕೆಣಕಿದ್ದಾರೆ.3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರ್ಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರ್ಕಾರ.ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ.
‘ಗೃಹಲಕ್ಷ್ಮೀ’ ಎಂದ ಸರ್ಕಾರ ಅವರ ಬಾಳಿಗೆ ಗ್ರಹಣವಾಗಿದೆ. ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ.‘ಅನ್ನಭಾಗ್ಯ’ ಎಂದ ಸರ್ಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eight =
Remember me
