ಕೊಡಗು:ಬೈಕ್​ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಕಾಲೇಜು ವಿದ್ಯಾರ್ಥಿನಿ ಸಾವಿಗೀಡಾಗಿದ್ದು, ಮತ್ತೊಬ್ಬಳು ಗಾಯಗೊಂಡಿರುವ ಘಟನೆ ಕುಶಾಲನಗರದ ಕೂರ್ಗ್ ಸಿನಿಪ್ಲೆಕ್ಸ್ ಬಳಿ ನಡೆದಿದೆ.
ಕುಶಾಲನಗರದ ನಿವಾಸಿ ಭಾವನ (21) ಮೃತ ವಿದ್ಯಾರ್ಥಿನಿ. ಮಡಿಕೇರಿ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್​ಗೆ ಮಡಿಕೇರಿಯಿಂದ ಕುಶಾಲನಗರ ಕಡೆಗೆ ಹೊರಟಿದ್ದ ವಿದ್ಯಾರ್ಥಿನಿಯರಿದ್ದ ಸ್ಕೂಟಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಮೂರು ದಿನ ಮಳೆ ಮುಂದುವರಿಕೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಸಿದ ಹವಾಮಾನ ಇಲಾಖೆ…
ಮೃತ ಭಾವನ ಇಂದಿರಾ ಬಡಾವಣೆಯ ಪೂಣಚ್ಚ ಎಂಬುವರ ಪುತ್ರಿ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಮಾರ್ಗಮಧ್ಯೆ ಅಸುನೀಗಿದ್ದಾಳೆ. ಗಾಯಗೊಂಡಿರುವ ಮತ್ತೊಬ್ಬ ವಿದ್ಯಾರ್ಥಿನಿಯನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತಳು ಮತ್ತು ಗಾಯಗೊಂಡ ವಿದ್ಯಾರ್ಥಿನಿ ಇಬ್ಬರು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ‌.ಎಂ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕೇಂದ್ರ ಸಚಿವ ಆರ್​ಕೆ ರಂಜನ್ ಸಿಂಗ್​​ ನಿವಾಸಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಅನಂತ್ ಅಂಬಾನಿ 5 ರೂ. ಪಾಕೆಟ್​ ಮನಿ ಪಡೆಯುತ್ತಿದ್ರಾ? ಲೇವಡಿ ಮಾಡುತ್ತಿದ್ದ ಸ್ನೇಹಿತರು ಹೇಳಿದ್ದೇನು?

ಗ್ಯಾರಂಟಿಗಳ ವಿರುದ್ಧ ಪೋಸ್ಟ್​ ಹಾಕಿದ್ದ ವ್ಯಕ್ತಿ ಮೇಲೆ ದೂರು; ಸಮುದಾಯಗಳ ನಡುವೆ ಎತ್ತಿಕಟ್ಟುವ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + one =
Remember me
