ರಾಮನಗರ:ಮಾಗಡಿ ತಹಸೀಲ್ದಾರ್ ಶ್ರೀನಿವಾಸ್ ಪ್ರಸಾದ್ ನಾಪತ್ತೆಯಾಗಿದ್ದಾರೆ. ಪ್ರಕರಣವೊಂದರಲ್ಲಿ ಎ2 ಆರೋಪಿಯಾಗಿರುವ ತಹಸೀಲ್ದಾರ್​, 15 ದಿನಗಳಿಂದ ಕೆಲಸಕ್ಕೂ ಬಂದಿಲ್ಲ. ಇವರ ಮೊಬೈಲ್ ಫೋನ್ ಸ್ವಿಚ್ಡ್​ ಆಫ್​ ಆಗಿದೆ!
ಜ.3ರಂದು ಮಾಗಡಿ ತಾಲೂಕು ಕಚೇರಿ ಬಳಿ ಏಜೆಂಟ್ ಮಂಜುನಾಥ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಜಮೀನು ವಿಚಾರದಲ್ಲಿ ಸಾರ್ವಜನಿಕರೊಬ್ಬರಿಂದ 60 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ ಏಜೆಂಟ್‌, ಮುಂಗಡವಾಗಿ 20 ಸಾವಿರ ಹಣ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದ.
ಬಂಧಿತ ಏಜೆಂಟ್ ಮಂಜುನಾಥ್​, ತಹಸೀಲ್ದಾರ್ ಶ್ರೀನಿವಾಸ್ ಪ್ರಸಾದ್​ ಅವರ ಆಪ್ತ. ಮಂಜುನಾಥ್ ಹಾಗೂ ತಹಸೀಲ್ದಾರ್ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ವಿಚಾರಣೆಗೂ ಬಾರದೇ, ಕೆಲಸಕ್ಕೂ ಬಾರದೇ 15 ದಿನಗಳಿಂದ ತಹಸೀಲ್ದಾರ್ ನಾಪತ್ತೆಯಾಗಿದ್ದಾರೆ. ಇವರಿಗೆ ರಜೆ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಕೂಡ ಸ್ಪಷ್ಟ ಪಡಿಸಿದ್ದಾರೆ.
ಇದೇ ತಹಸೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಸಚಿವರಾದ ಆರ್.ಅಶೋಕ್ ಹಾಗೂ ಅಶ್ವಥ್ ನಾರಾಯಣ್ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.
ಪ್ರವೀಣ್​ ನೆಟ್ಟಾರು ಹತ್ಯೆ: ಮತ್ತಿಬ್ಬರು ಆರೋಪಿಗಳ ಸುಳಿವು ಕೊಟ್ಟವರಿಗೆ 10 ಲಕ್ಷ ನಗದು ಬಹುಮಾನ ಘೋಷಿಸಿದ NIA

ಬಾಳಿ ಬದುಕಬೇಕಿದ್ದ ತುಮಕೂರಿನ ಮೂವರು ಸಹೋದರಿಯರು ಒಂಟಿ ಮನೆಯಲ್ಲಿ ದುರಂತ ಅಂತ್ಯ! ಇವರ ಕಣ್ಣೀರ ಕಥೆ ಹೇಳತೀರದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 6 =
Remember me
