ಹುಬ್ಬಳ್ಳಿ: ಮಹಾದಾಯಿ ಯೋಜನೆ ಕಾಮಗಾರಿಗೆ ಯೋಜನೆ ರೂಪಿಸಲು ಶೀಘ್ರದಲ್ಲೇ ತಜ್ಞರ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಯೋಜನೆಗೆ ಬಗ್ಗೆ ನೋಟಿಫೀಕೇಷನ್​ ಹೊರಡಿಸಲು ಸುಪ್ರೀಂ ಕೋರ್ಟ್​ ಸೂಚಿಸಿತ್ತು. ಕೋರ್ಟ್​ ಸೂಚಿಸಿದ ಒಂದು ವಾರದಲ್ಲೇ ನಾವು ನೋಟಿಫಿಕೇಷನ್​ ಹೊರಡಿಸಿದ್ದೇವೆ. ಯೋಜನೆ ಬಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಜೆಟ್​​ನಲ್ಲಿ 400ರಿಂದ 500 ಕೋಟಿ ರೂಪಾಯಿ ಹಣವನ್ನು ಯೋಜನೆಗೆ ಮೀಸಲಿಡುವಂತೆ ಕೋರಿದ್ದೇನೆ. ಇದಕ್ಕೆ ಅವರು ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪ್ರಧಾನಿಗಳು ಉತ್ತಮ‌ ಕೆಲಸ ಮಾಡಿದ್ದಾರೆ.ಮಹದಾಯಿ ಯೋಜನೆ ಕಾಮಗಾರಿ ವಿಳಂಬವಾಗುವುದಿಲ್ಲ. ಏಕೆಂದರೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಅರಣ್ಯ ಇಲಾಖೆ ಜಮೀನು ಇಲ್ಲ. ಹೀಗಾಗಿ ತೊಡಕು ಸಂಭವಿಸುವುದಿಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ಬಂದಾಗ ಮಹಾದಾಯಿ ಯೋಜನೆ ಸಮಸ್ಯೆ ಬಗೆ ಹರಿಸುವುದಾಗಿ ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 18 =
Remember me
