ಬೆಂಗಳೂರು: ಪ್ರಸಕ್ತ ಸಾಲಿನ ಮಹರ್ಷಿ ಶ್ರೀ ವಾಲ್ಮೀಕಿ ರಾಜ್ಯಮಟ್ಟದ ಪ್ರಶಸ್ತಿಗೆ  ವಿವಿಧ ಕ್ಷೇತ್ರಗಳ ಎಂಟು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ಪ್ರಕಟಿಸಿದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ನಡೆಯಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ  ನ್ಯಾ.ಎನ್.ವೈ ಹನುಮಂತಪ್ಪ (ನ್ಯಾಯಾಂಗ) ಮಹಾದೇವಮ್ಮ ರಂಗಸ್ವಾಮಿ ( ಧಾರ್ಮಿಕ), ರಾಮಣ್ಣ ಗಸ್ತಿ ( ಶಿಕ್ಷಣ), ಜಿ.ಓ.ಮಹಾಂತಪ್ಪ (ಸಮಾಜ ಸೇವೆ) ಸೋಮಣ್ಣ (ಸಂಘಟನೆ), ಶಾರದಾ ಪ್ರಭು ನಾಯಕ (ವೈದ್ಯಕೀಯ), ಸುಕನ್ಯಾ (ಸಾಹಿತ್ಯ) ಮತ್ತು ಸುಜಾತಮ್ಮ (ರಂಗಭೂಮಿ) ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ ನಗದು, 20 ಗ್ರಾಮ್ ಚಿನ್ನದ ಪದಕ, ಪ್ರಶಸ್ತಿ ಫಲಕ ಪ್ರದಾನ ಮಾಡಿ ಗೌರವಿಸಲಾಗುತ್ತದೆ.
ಶಾಸಕರ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಶನಿವಾರ ಬೆಳಗ್ಗೆ 9.30ಕ್ಕೆ ಸಿಎಂ ಮಾಲಾರ್ಪಣೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬಸವನಗುಡಿಯಿಂದ ವಾಲ್ಮೀಕಿ ಜ್ಯೋತಿಯೊಂದಿಗೆ ಸಮುದಾಯದ ಮಹನೀಯರ ಕುರಿತ ಸ್ತಬ್ಧಚಿತ್ರಗಳ ಮೆರವಣಿಗೆ, ಬೈಕ್ ರ‌್ಯಾಲಿ ನಡೆಯಲಿದೆ.  ಬಸವೇಶ್ವರ ವೃತ್ತದಿಂದ ವಾಲ್ಮೀಕಿ ಭಾವಚಿತ್ರದ ಸಾರೋಟಿನೊಂದಿಗೆ ವಿವಿಧ ಬುಡಕಟ್ಟುಗಳ ಕಲಾ ಪ್ರದರ್ಶನ  ಹೊರಟು ವಿಧಾನಸೌಧಕ್ಕೆ ತಲುಪಲಿದೆ.
ನಂತರ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಜರಿರುವರು. ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ, ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆವಹಿಸಲಿದ್ದಾರೆ.
ಈ ಬಾರಿ ಪ್ರಶಸ್ತಿಗಳಿಗೆ 60 ವರ್ಷ ಮೇಲ್ಪಟ್ಟವರನ್ನು ಪರಿಗಣಿಸಲಾಗಿದೆ. ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಸರ್ಕಾರಿ ರಜಾದಿನ ಮುಂದುವರಿದಿದೆ. ಈ ಕುರಿತು ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗುವುದು. ಬರಗಾಲದ ನಡುವೆಯೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಲು ಸರ್ಕಾರ ಸೂಚಿಸಿದೆ ಎಂದು ಬಿ.ನಾಗೇಂದ್ರ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × one =
Remember me
