ಉತ್ತರಕನ್ನಡ:ಗಡಿ ಪ್ರದೇಶದಲ್ಲಿ ಪುಂಡಾಟಿಕೆ ನಡೆಸುವ ಎಂಇಎಸ್ ಸಂಘಟನೆ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಗುಡುಗಿದ್ದು, ಹೀಗೇ ಮುಂದುವರಿದರೆ ಕನ್ನಡಿಗರ ಶಕ್ತಿ ಪ್ರದರ್ಶನ ಮಾಡಬೇಕಾದ್ದು ಅನಿವಾರ್ಯವಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಎಂಇಎಸ್​ ಗಡಿ ವಿವಾದಗಳ ಕುರಿತಾಗಿ ಇಂದು ಉತ್ತರಕನ್ನಡ ಜಿಲ್ಲೆಯ ಅಂಕೋಲದಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ಎಂಇಎಸ್ ಪುಂಡರ ಮೇಲಿನ ದೇಶದ್ರೋಹ ಪ್ರಕರಣ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ. ಸರ್ಕಾರಕ್ಕೆ ಈ ಬಗ್ಗೆ ಮನದಟ್ಟು ಮಾಡುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡಲಿದೆ ಎಂದು ಹೇಳಿದ್ದಾರೆ.
ಕನ್ನಡಿಗರ ಮನೋಭಾವನೆಯನ್ನು ಕೆರಳಿಸುವ ಪ್ರಯತ್ನವನ್ನು ಎಂಇಎಸ್​ ನಿರಂತರವಾಗಿ ಮಾಡುತ್ತಿದೆ. ಎಂಇಎಸ್ ಗಡಿವಿವಾದ ಹೇಳಿಕೆಗಳನ್ನು ಸರ್ಕಾರ ಮೊದಲ ಖಂಡಿಸಬೇಕು ಎಂದ ಅವರು, ಎಂಇಎಸ್​ನಿಂದ ಇಂಥವು ಹೀಗೇ ಮುಂದುವರಿದರೆ ಕನ್ನಡಿಗರ ಶಕ್ತಿ ಪ್ರದರ್ಶನ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತದೆ, ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಹೇಳಿದರು.
ರಾಜ್ಯ ಸರ್ಕಾರ ಎಂಇಎಸ್​ ಪುಂಡಾಟಿಕೆ ವಿರುದ್ಧ ಸ್ಪಷ್ಟ ನಿಲುವು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಮಹಾರಾಷ್ಟ್ರದ ಹಲವು ಹಳ್ಳಿಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಅಧಿಕವಾಗಿದೆ. ಅವೆಲ್ಲವೂ ಕರ್ನಾಟಕಕ್ಕೆ ಸೇರಬೇಕೆಂಬ ಹೋರಾಟ ಅನಿವಾರ್ಯವಾಗಲಿದೆ ಎಂದ ಜೋಶಿ, ನಾವೆಲ್ಲ ಭಾತೃತ್ವದ ಭಾವನೆಯಲ್ಲಿ ಇದ್ದಾಗ ಎಂಇಎಸ್ ಪುಂಡಾಟಿಕೆ ಬಿಡಬೇಕು ಎಂದರು.
ಕೋವಿಡ್​ ಲಸಿಕೆ ಹಾಕಿಸಿಕೊಳ್ಳುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಎಲ್ಲೆಲ್ಲಿ ಹೇಗೆ? ಇಲ್ಲಿದೆ ಹವಾಮಾನ ಮುನ್ಸೂಚನೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
