ಬೆಂಗಳೂರು: ಮಹಿಳಾ ಉದ್ಯಮಿಗಳ ತಂಡ ಉಬುಂಟು ಉದ್ಯಮಶೀಲತೆ ಮತ್ತು ಹೆಚ್ಚಿನ ವ್ಯಾಪಾರ ಅವಕಾಶಗಳ ವೃದ್ಧಿಗೆ ಕಾಂಬೋಡಿಯಾ ದೇಶಕ್ಕೆ ಭೇಟಿ ನೀಡಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿತು.ಸಹಿ ಹಾಕಲಾದ ತಿಳುವಳಿಕಾ ಒಪ್ಪಂದವು ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಮತ್ತು ಗಡಿಯಾಚೆಗಿನ ಸಹಯೋಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ತಂಡದ ಸದಸ್ಯರು ಹೇಳಿಕೊಂಡಿದ್ದಾರೆ.ಮಹಿಳಾ ಉದ್ಯಮಿಗಳನ್ನು ಬೆಂಬಲಿಸುವ ಬದ್ಧತೆ ಈ ಪಾಲುದಾರಿಕೆಯ ಆಶಯವಾಗಿದೆ. ಸಹಯೋಗವು ರಫ್ತು, ವಿನಿಮಯ, ಉತ್ಪನ್ನ-ಕೇಂದ್ರಿತ ಆನ್ಲೈನ್ ಸಭೆಗಳು, ಪರಸ್ಪರ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವುದು ಮತ್ತು ಸಾಂಸ್ಕೃತಿಕವಾಗಿಯೂ ವಿನಿಮಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.ಮಹಿಳಾ ಉದ್ಯಮಿಗಳ ತಂಡವನ್ನ ಮುನ್ನಡೆಸುತ್ತಿರುವ ನಿವೃತ್ತ ಐಎಎಸ್​ ಅಧಿಕಾರಿ ರತ್ನಪ್ರಭಾ ಮಾತನಾಡಿ “ಈ ಪಾಲುದಾರಿಕೆಯು ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಮೂಲಕ ನಮ್ಮ ಆರ್ಥಿಕ ಸಾಮರ್ಥ್ಯವನ್ನು ಬಲಪಡಿಸುವಲ್ಲಿ ಗಮನಾರ್ಹ ಬದಲಾವಣೆಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − 8 =
Remember me
