ತುಮಕೂರು:ಪೌರ ಕಾರ್ಮಿಕರ ಸಮಗ್ರ ಆರೋಗ್ಯ ತಪಾಸಣೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣದ ತನಿಖೆಯಲ್ಲಿ ಮುಖ್ಯ ಆರೋಪಿಯೇ ತನಿಖಾಧಿಕಾರಿ ಆಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಪುರುಷ ಕಾರ್ಮಿಕರಿಗೂ ಸ್ತನ ಕ್ಯಾನ್ಸರ್‌ ಪರೀಕ್ಷೆ ನಡೆಸಿರುವುದಾಗಿ ಬಿಲ್‌ ಸೃಷ್ಟಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ತನಿಖೆಗೆ ತಂಡ ರಚಿಸಿದೆ. ಪ್ರಕರಣದ ಮುಖ್ಯ ಆರೋಪಿಯಾಗಿರುವ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಬಿ.ಕೆ.ಆಶಾ ಎಂಬುವರನ್ನೇ ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ:ದುಪ್ಪಟ್ಟ ಹಾಕದವರೇ ಟಾರ್ಗೆಟ್​: ಸಿಕ್ಕಿಬಿದ್ದ ಸೈಕೋ ಶರವಣನ್​, ನಿಟ್ಟುಸಿರು ಬಿಟ್ಟ ಮಹಿಳೆಯರು
ಆರೋಪಿ ಆಶಾ, ತನಿಖಾ ತಂಡದಲ್ಲಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ತನಿಖೆ ಎಷ್ಟು ಪ್ರಾಮಾಣಿಕವಾಗಿ ನಡೆಯುತ್ತದೆ? ಇದು ಕಳ್ಳರ ಕೈಗೆ ಮನೆ ಬೀಗ ಕೊಟ್ಟಂತಾಗಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.(ದಿಗ್ವಿಜಯ ನ್ಯೂಸ್​)
2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….

ಸೇತುವೆಯಿಂದ ಕಣಿವೆಗೆ ಬಿದ್ದ ಬಸ್​: 10 ಮಂದಿ ದುರಂತ ಸಾವು, 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
