ಬೆಂಗಳೂರು:ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಒಂದು ಹೊರಬಂದಿದೆ.
ಪ್ರತಿಮಾ ಅವರ ಹತ್ಯೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ಅವರು ಮನೆಯ ಡೋರ್ ತೆಗೆಯುತ್ತಿದ್ದಂತೆ ದುಷ್ಕರ್ಮಿಗಳು ಹಿಂದಿನಿಂದ ದಾಳಿ ಮಾಡಿ ಹತ್ಯೆ ಮಾಡಿ ಪರಾರಿಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಶನಿವಾರ ಸಂಜೆ ಎಂದಿನಂತೆ ಕೆಲಸ ಮುಗಿದ ಬಳಿಕ ರಾತ್ರಿ 7:45ರ ಸುಮಾರಿಗೆ ಕಚೇರಿಯಿಂದ ಹೊರಟಿದ್ದು, ರಾತ್ರಿ 8:30ರ ಸುಮಾರಿಗೆ ಮನೆಗೆ ಬಂದಿದ್ದಾರೆ. ಬಳಿಕ ಡ್ರೈವರ್​ ಕಾರ್​ ಪಾರ್ಕ್​ ಮಾಡಿ ತನ್ನ ಪಾಡಿಗೆ ತಾನಿ ತೆರಳಿದ್ದಾನೆ. ಕಾರಿನಿಂದ ಇಳಿದು ಪ್ರತಿಮಾ ಮೊದಲ ಮಹಡಿಯಲ್ಲಿರುವ ಮನೆಗೆ ಬಂದಿದ್ದರು. ಮನೆಯ ಡೋರ್ ತೆಗೆಯುತ್ತಿದ್ದಂತೆ ಹಿಂದಿನಿಂದ ದಾಳಿ ಮಾಡಲಾಗಿದೆ.
ಇದನ್ನೂ ಓದಿ:ಬಿಜೆಪಿ ಎಂದರೆ ಭರವಸೆ, ನಂಬಿಕೆ; ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪ್ರಧಾನಿ ಮೋದಿ
ಈ ವೇಳೆ ಪ್ರತಿಮಾರ ಬಾಯಿಯನ್ನು ಮುಚ್ಚಿರುವ ಆರೋಪಿಗಳು ಕುತ್ತಿಗೆಯಿಂದ ಹಗ್ಗವನ್ನು ಕಟ್ಟಿ ಮನೆ ಒಳಗೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಚಾಕುವಿನಿಂದ ಕತ್ತು ಸೀಳಿ ಅವರ ಹತ್ಯೆ ಮಾಡಿದ್ದಾರೆ. ದಾಳಿ ವೇಳೆ ಪ್ರತಿಮಾ ಧರಿಸುತ್ತಿದ್ದ ಕನ್ನಡಕ ಹಾಗೂ ಊಟದ ಡಬ್ಬಿ ಬಾಗಿಲ ಬಳಿಯೇ ಬಿದ್ದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಶನಿವಾರ ರಾತ್ರಿ ಪ್ರತಿಮಾ ಅವರ ಸಹೋದರ ಅವರಿಗೆ ಅನೇಕ ಬಾರಿ ಕರೆ ಮಾಡಿದ್ದು, ಅವರು ಕರೆ ಸ್ವೀಕರಿಸಿರಲಿಲ್ಲ. ಬೆಳಗ್ಗೆ 8 ಘಂಟೆ ಸುಮಾರಿಗೆ ಪ್ರೆತಿಮಾ ಅವರ ಮನೆ ಬಂದು ಪರಿಶೀಲಿಸಿದಾಗ ಪ್ರತಿಮಾ ಅವರು ಕೊಲೆಆಯಗಿರುವ ವಿಚಾರ ಬಯಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 14 =
Remember me
