ನವದೆಹಲಿ:ಬಿಜೆಪಿಯಿಂದ ವಿರೋಧ ಪಕ್ಷದ ನಾಯಕರ ಆಯ್ಕೆ ಇನ್ನೂ ಆಗದಿರುವುದು ಕುತೂಹಲ ಕೆರಳಿಸಿರುವ ಬೆನ್ನಿಗೇ ನಾಳೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯಲಿರುವುದು ತಿಳಿದುಬಂದಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಎರಡರ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ನಾಳೆ ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಇಲ್ಲ ಎಂಬ ವಿಚಾರವನ್ನೂ ಬಿಎಸ್​ವೈ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ನಮ್ಮೂರಲ್ಲಿ ಸರ್ಕಾರಿ ವೈದ್ಯರೇ ಉಳಿಯಲ್ಲ.. ನೋಡಿ ಎಂಥ ಪರಿಸ್ಥಿತಿ!: ಸಿಎಂ ಸಿದ್ದರಾಮಯ್ಯ
ನಾಳೆ ಕೇಂದ್ರದಿಂದ ರಾಜ್ಯಕ್ಕೆ ಇಬ್ಬರು ವೀಕ್ಷಕರು ಆಗಮಿಸಲಿದ್ದಾರೆ. ವಿನೋದ್ ತಾವಡೆ ಮತ್ತು ಮನ್​ಸುಖ್​ ಮಾಂಡವೀಯ ವೀಕ್ಷಕರಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಅವರು ರಾಜ್ಯಾಧ್ಯಕ್ಷ ಹುದ್ದೆ ಕುರಿತು ಕೂಡ ಮಾಹಿತಿ ಸಂಗ್ರಹಿಸಲಿದ್ದು, ಕೇಂದ್ರದ ನಾಯಕರಿಗೆ ವರದಿ ಒಪ್ಪಿಸಲಿದ್ದಾರೆ. ಆ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ನಡೆಯಲಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ.
‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − two =
Remember me
