ಬೆಂಗಳೂರು:ಸಚಿವ ರಮೇಶ್​ ಜಾರಕಿಹೊಳಿ ಭಾಗಿ ಆಗಿದ್ದಾರೆನ್ನಲಾದ ಸೆಕ್ಸ್​ ಸಿಡಿಯೊಂದು ಬಹಿರಂಗವಾದ ಬೆನ್ನಿಗೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಗೋಚರಿಸಲಾರಂಭಿಸಿದೆ. ಅಶ್ಲೀಲ ದೃಶ್ಯಗಳಿರುವ ವಿಡಿಯೋ ತುಣುಕು ವೈರಲ್ ಆಗುತ್ತಿರುವಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾನೂನು ಹಾಗೂ ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರ ಜತೆ ಸಭೆ ನಡೆಸುತ್ತಿದ್ದಾರೆ. ಬಜೆಟ್ ಮೀಟಿಂಗ್ ಮುಗಿಸಿ ಕಾವೇರಿಗೆ ಒಂದೇ ಕಾರಿನಲ್ಲಿ ತೆರಳಿದ ಬಿಎಸ್​ವೈ ಹಾಗೂ ಬೊಮ್ಮಾಯಿ ಅವರು ಜಾರಕಿಹೊಳಿ ಪ್ರಕರಣ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ.
ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ:ನಾಳೆಯೇ ಸಚಿವ ಸಂಪುಟ ಸಭೆ ಇದ್ದು, ಇಂದು ಈ ಸಿಡಿ ಬಿಡುಗಡೆ ಆಗಿರುವುದು ಆಡಳಿತಾರೂಢ ಬಿಜೆಪಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತಕ್ಷಣಕ್ಕೆ ಏನು ಮಾಡಬೇಕು, ಏನು ಉತ್ತರ ನೀಡಬೇಕು ಎನ್ನುವ ಬಗ್ಗೆ ಗಂಭೀರ ಚರ್ಚೆಗಳಾಗುತ್ತಿದ್ದು, ಪ್ರಕರಣ ಸಂಬಂಧ ಬಹಿರಂಗ ಹೇಳಿಕೆ ನೀಡಲು ಬಿಜೆಪಿ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ನಾಳೆ ಸಂಪುಟ ಸಭೆ ನಂತರ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಸದ್ಯಕ್ಕೆ ಏನ್ನನ್ನೂ ಸಮರ್ಥಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಬಿಜೆಪಿ ನಾಯಕರು ಇದ್ದಾರೆ ಎನ್ನಲಾಗಿದೆ.
ರಾಜೀನಾಮೆಗೆ ಆಗ್ರಹ:ಮತ್ತೊಂದೆಡೆ ಈ ಪ್ರಕರಣವನ್ನು ಬಿಜೆಪಿ ವಿರುದ್ಧ ರಾಜಕೀಯ ಅಸ್ತ್ರವಾಗಿ ಯಾವ ರೀತಿ ಬಳಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್​ ನಾಯಕರು ಮುಂದಾಗಿದ್ದು, ಕೆಪಿಸಿಸಿಯಲ್ಲೂ ಭಾರಿ ಮಾತುಕತೆಗಳು ನಡೆಯಲಾರಂಭಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕುಮಾರಪಾರ್ಕ್ ನಿವಾಸಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಎಂಎಲ್​​ಸಿ ನಜೀರ್ ಅಹಮದ್ ಈ ಸಂದರ್ಭದಲ್ಲಿದ್ದರು. ನಾಳೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ನಾಯಕರು ಸುದ್ದಿಗೋಷ್ಠಿ ನಡೆಸಿ, ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಆಗ್ರಹಿಸಲಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ರಮೇಶ್​ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್: ಕೆಲಸ ಕೇಳಿಕೊಂಡು ಬಂದವಳ ಜತೆ ಸಲ್ಲಾಪ

ಸೆಕ್ಸ್ ಸಿಡಿ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರಾ?

ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

‘ಕರ್ನಾಟಕ ಭವನವೇನು ನಿಮ್ಮ​ ಬೆಡ್​ ರೂಮಾ?’ ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಪ್ರಶ್ನೆ

ಇದಿನ್ನೂ ಟ್ರೇಲರ್​​, ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ರಿಲೀಸ್​!? ಈ ಭಾಗದ ಸಚಿವರ ಸಿಡಿ ರಿಲೀಸ್​ ಆಗೋ ಸಾಧ್ಯತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − eleven =
Remember me
