ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಶೇ.10ರಷ್ಟು ಬದಲು 10 ಯೂನಿಟ್‌ ಫ್ರೀ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಮಾತನಾಡಿದ ಸಚಿವ ಎಚ್​.ಕೆ. ಪಾಟೀಲ್, ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್​​ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ.
ಇದನ್ನೂ ಓದಿ:ಬೆಂಗಳೂರಿನಿಂದ ಅಯೋಧ್ಯೆಗೆ ಶುರುವಾಯ್ತು ವಿಮಾನ ಸೇವೆ; ಇಲ್ಲಿದೆ ಸಂಪೂರ್ಣ ವಿವರ
ಸೆಂಟ್ರಲ್ ಇಆರ್​ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ.
ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ.  ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಸಚಿವ ಎಚ್​.ಕೆ. ಪಾಟೀಲ್​ ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × 2 =
Remember me
