ಬೆಂಗಳೂರು:ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ರಾಂಏಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ತೆರಳಿರುವ ಬಗ್ಗೆ ತಿಳಿದು ಬಂದಿದೆ.
VIDEO | Bengaluru cafe blast suspect caught on CCTV.At least 10 people were injured in a low intensity bomb blast at the popular Rameshwaram Cafe in Bengaluru's Whitefield locality on Friday. Police suspect that an improvised explosive device (IED) fitted with a timer inside a…pic.twitter.com/EWGzLAmy1M
ಇದನ್ನೂ ಓದಿ:ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; FSL ವರದಿಯಲ್ಲಿ ಬಹಿರಂಗಬಾಯ್ತು ಸ್ಫೋಟಕ ಮಾಹಿತಿ
ಇದಲ್ಲದೆ ಆರೋಪಿ 3-4 ಬಸ್ ಬದಲಿಸಿ ಪ್ರಯಾಣ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಹೊರರಾಜ್ಯಕ್ಕೆ ಎಸ್ಕೇಪ್ ಆಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿಯಲ್ಲಿ ಆತ ಯಾರೊಂದಿಗೂ ಫೋನಿನಲ್ಲಿ ಮಾತನಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಆದರೆ ತನಿಖೆಗೆ ಇಳಿದಾಗ ಆತ ಡಮ್ಮಿ ಫೋನ್ ಅನ್ನು ಬಳಸಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಘಟನೆ ನಡೆದು 48 ಘಟನೆಗಳಾಗುತ್ತ ಬಂದರೂ ಈವರೆಗೂ ಶಂಕಿತನನ್ನು ಬಂಧಿಸದೆ ಇರುವುದು ವಿಪಕ್ಷಗಳು ಹಾಗೂ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. 200 ಅಧಿಕಾರಿಗಳು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
