ಕಲಬುರಗಿ:ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್​ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ದೆಹಲಿ ಮತ್ತು ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿವೆ.
ಈ ಬಗ್ಗೆ ಶಾಸಕ ಪ್ರಿಯಾಂಕ್​ ಖರ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿರುವ ನನ್ನ ತಂದೆ ಮಲ್ಲಿಕಾರ್ಜುನ ಖರ್ಗೆ ಮತ್ತು ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಬೆದರಿಕೆ ಹಾಕುತ್ತಿರುವವರನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.ಇದನ್ನೂ ಓದರಿಸಿದ್ದರಾಮಯ್ಯ ನಮ್ಮ ನಾಯಕರು ಎಂದ ಬಿಜೆಪಿ ಸಚಿವ!
ನನ್ನ ತಂದೆಗೆ ಮೂರು ಬಾರಿ ಬೆದರಿಕೆ ಕರೆ ಬಂದಿದೆ. ನನಗೆ ಎರಡು ಸಲ ಬಂದಿದೆ. ಈ ಬಗ್ಗೆ ದೆಹಲಿ ಮತ್ತು ಬೆಂಗಳೂರು ಪೊಲೀಸ್​ ಠಾಣೆಗಳಲ್ಲಿ ನನ್ನ ತಂದೆ ದೂರು ನೀಡಿದ್ದಾರೆ. ನಾನು ಬೆಂಗಳೂರಿನಲ್ಲಿ ದೂರು ಕೊಟ್ಟಿದ್ದೇನೆ. ಆದರೂ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Since Sri@kharge’s nomination to Rajya Sabha, he has received 3 threats dissuading him to speak about PM@narendramodi& I have been threatened twice.
'Why're you criticising the PM?': Congress' Kharge gets threatening call.https://t.co/eonNYT1Fp8
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)February 9, 2021

ಬುದ್ಧ. ಬಸವಣ್ಣ, ಅಂಬೇಡ್ಕರ್​ ತತ್ವ-ಸಿದ್ಧಾಂತಗಳನ್ನು ನಂಬಿದವರು ನಾವು. ಯಾವಾಗಲೂ ಸತ್ಯ ಮತ್ತು ಸಂವಿಧಾನದ ಪರವಾಗಿ ನಿಲ್ಲುತ್ತೇವೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ, ಇವು ನಮ್ಮನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ. ಅಲ್ಲದೆ ನಮ್ಮ ಸಿದ್ಧಾಂತ ಮತ್ತು ಮೌಲ್ಯಗಳನ್ನು ತಿಳಿಸಿಕೊಡುತ್ತವೆ ಎಂದು ಪ್ರಿಯಾಂಕ್​ ಟ್ವೀಟ್​ನಲ್ಲಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪರ ಮನೆಗೆ ಸಂತರ ದಂಡು! 40 ಸ್ವಾಮೀಜಿಗಳ ಬೇಡಿಕೆ ಏನು?

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eight =
Remember me
