ಬೆಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತಿದೆ. ಸದಸ್ಯತ್ವ ನೋಂದಣಿಯ ಅರಿವಯ ಈಗ ಆಗುತ್ತಿದೆ. ಕೆಲವರು ತಮ್ಮ ಕಾರ್ಯಕರ್ತರಿಗೆ ಮತದಾನದ ಹಕ್ಕು ನೀಡಿದ್ದು, ಯಾರ ಮೇಲೆಯೂ ಒತ್ತಡ ಇಲ್ಲದೆ ಮತದಾನ ನಡೆಯಲಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ನಾಯಕತ್ವ ಸ್ಥಾನಕ್ಕೆ ಹಿರಿಯ ನಾಯಕರು ಸ್ಪರ್ಧೆ ಮಾಡಿದ್ದಾರೆ. ಇದರಿಂದ ಕರ್ನಾಟಕ್ಕೆ ಒಳ್ಳೆಯದಾಗಲಿದೆ. ಮಲ್ಲಿಕಾರ್ಜುನ ಖರ್ಗೆಯವರ ಆಯ್ಕೆ ಇಡೀ ಭಾರತದಲ್ಲಿ ಪರಿಣಾಮ ಆಗಲಿದೆ. ನಾನೂ ಕೂಡ ಅಧ್ಯಕ್ಷ ಸ್ಥಾನದಲ್ಲಿ ಗಾಂಧಿ ಕುಟುಂಬ ಇರಬೇಕೆಂದು ಒತ್ತಾಯ ಮಾಡಿದ್ದೆ. ಆದರೆ ಅವರೇ ಬೇರೆಯವರಿಗೆ ಅವಕಾಶ ಕೊಡೋಣ ಎಂದಿದ್ದಾರೆ ಎಂದು ಹೇಳಿದರು.
ಬಿಜೆಪಿ ರಬ್ಬರ್ ಸ್ಟ್ಯಾಂಪ್ ಅಧ್ಯಕ್ಷ ಎಂದು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯ ಜೆಪಿ ನಡ್ಡಾ ಏನ್ಮಾಡ್ತಿದಾರೆ? ಎಲ್ಲಾ ಅವರೇ ತೀರ್ಮಾನ ಮಾಡ್ತಾರಾ? ಖರ್ಗೆ ಅನೇಕ ರಾಜ್ಯಗಳಲ್ಲಿ ರಾಜಕಾರಣ ಮಾಡಿದವರು. ಕೆಳಮನೆ ಹಾಗೂ ಮೇಲ್ಮನೆಯಲ್ಲೂ ಕೆಲಸ ಮಾಡಿದ ಅನುಭವ ಇದೆ. ಸಲಹೆ ತೆಗೆದುಕೊಳ್ಳುವುದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದರು.
ನಾನು ಕೂಡ ಕೆಲ ಸಂದರ್ಭದಲ್ಲಿ ಪರಮೇಶ್ವರ್, ಅಲ್ಲಂ ವೀರಭದ್ರಪ್ಪ ಅವರ ಸಲಹೆ ಪಡೆಯುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಂದಲೂ ಸಲಹೆ ಕೇಳ್ತಿರುತ್ತೇನೆ. ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುವಾಗ ಸಲಹೆ ಅಗತ್ಯ, ಇದರಲ್ಲಿ ತಪ್ಪಿಲ್ಲ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
