ಬೆಂಗಳೂರು:ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ, ರಾಷ್ಟ್ರ ರಾಜಕಾರಣದಲ್ಲೇ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲೇ ಸಾಕಷ್ಟು ಕೆಲಸಗಳಿವೆ. ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ಲೋಕಸಭೆ ಪ್ರತಿಪಕ್ಷದ ನಾಯಕರಾಗಿ, ಪಕ್ಷದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಲ್ಲ ರಾಜ್ಯಗಳ ಆಗುಹೋಗುಗಳ ಬಗ್ಗೆ ನೋಡುತ್ತಿದ್ದಾರೆ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ಅಲ್ಲಿಯೇ ಇದ್ದು, ಪಕ್ಷವನ್ನು ಮುನ್ನಡೆಸುತ್ತಾರೆ ಎಂದರು.
ಸರ್ಕಾರ ಬೀಳಿಸುವ ಬಗ್ಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಶಪಥ ಮಾಡಿರುವ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲೇ ಪ್ರಸ್ತಾಪವಾಯಿತು. ಜೆಡಿಎಸ್ ನಾಯಕರೇ ಅಲ್ಲ, ಬಿಜೆಪಿಯವರು ಸೇರಿ ಡಿಸ್ಟರ್ಬ್ ಮಾಡಲು ನೋಡುತ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ಆ ರೀತಿ ಯೋಚನೆ ಮಾಡುವುದೇ ಇಲ್ಲ. ಬಿಜೆಪಿ, ಜೆಡಿಎಸ್‌ನವರು ಕನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿ, ಜೆಡಿಎಸ್ ಷಡ್ಯಂತ್ರದ ಬಗ್ಗೆ ಸಿಎಂ ಮತ್ತು ಡಿಸಿಎಂ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ. ದೆಹಲಿ, ಪಶ್ಚಿಮ ಬಂಗಾಲ ಎಲ್ಲ ಕಡೆ ಸರ್ಕಾರ ಕೆಡವಲು ಹುನ್ನಾರ ನಡೆದಿದೆ. ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ರಾಜ್ಯಪಾಲರ ಸ್ಥಾನಕ್ಕೆ ಚ್ಯುತಿ ತರುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರ ಹಗರಣಗಳ ತನಿಖೆ ಬಗ್ಗೆ ಶಾಸಕಾಂಗ ಸಭೆಯಲ್ಲೂ ಚರ್ಚೆಯಾಗಿದೆ. ತನಿಖೆಗಳು ನಡೆಯುತ್ತಿವೆ. ಕೆಲವು ಕಡೆ ಕೋರ್ಟ್‌ನಿಂದ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ಅವುಗಳನ್ನು ತೆರವುಗೊಳಿಸು ಪ್ರಯತ್ನ ನಡೆದಿದೆ ಎಂದು ಹೇಳಿದರು.
ಕುಮಾರಸ್ವಾಮಿ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಕುಮಾರಸ್ವಾಮಿ ಈಗ ಬಿಜೆಪಿ ಭಾಗವಾಗಿದ್ದಾರೆ. ಅಜಿತ್ ಪವಾರ್ ಮೇಲೆ ಆರೋಪ ಇತ್ತು. ಅವರೂ ಬಿಜೆಪಿ ಸೇರಿದ್ದಾರೆ. ಎಲ್ಲ ಆರೋಪಗಳಿಗೂ ವಾಷಿಂಗ್ ಪೌಡರ್ ಹಾಕಿ ತೊಳೆದಿದ್ದಾರೆ. ಈಗ ಅವರುಗಳ ಮೇಲೆ ಯಾವ ಆರೋಪವಿಲ್ಲ ಎಂದು ವ್ಯಂಗ್ಯವಾಡಿದರು.
ಸಚಿವರಗಳ ಮೇಲೂ ಪ್ರಾಸಿಕ್ಯೂಷನ್ ಮನವಿ ಮಾಡಿದ್ದಾರೆ. ಇದು ಇನ್ನು ಮುಂದೆ ಎಲ್ಲ ಕಡೆ ಶುರುವಾಗಲಿದೆ. ಮುಂದೆ ಬಿಜೆಪಿಯವರಿಗೇ ತಿರುಗುಬಾಣವಾಗಲಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯಪಾಲರು ಯಾವ ಸಮುದಾಯಕ್ಕೆ ಸೇರಿದವರೆಂದು ಗೊತ್ತೇ ಇರಲಿಲ್ಲ. ಬಿಜೆಪಿಯವರು ಜಾತಿ ಬಣ್ಣ ಹಚ್ಚಿದರು. ನಾವುಗಳು ಯಾರು ಅವರ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ಕೇವಲ ಸಂವಿಧಾನದ ಪ್ರಕಾರ ನಡೆದುಕೊಳ್ಳಲಿ ಎಂದು ಹೇಳಿದ್ದೇವೆ.-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
