ಶಿವಮೊಗ್ಗ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೆ ಬಹುತೇಕು ಗೋಪೂಜೆ ಮುಂತಾದ ಸಂಭ್ರಮದಲ್ಲಿದ್ದಾರೆ. ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಿಸುವ ಕೃತ್ಯ ಅವ್ಯಾಹತವಾಗಿ ಮುಂದುವರಿದಿದೆ. ಇದಕ್ಕೆ ನಿದರ್ಶನವೆಂಬಂತೆ, ನಿನ್ನೆ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ 9 ಎತ್ತುಗಳು, ಎರಡು ಎಮ್ಮೆ ಮೃತಪಟ್ಟ ದುರಂತ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕಿನ ದಾನಸಾಲೆ ಹೊರಬೈಲು ಬಳಿ ಕ್ಯಾಂಟರ್​ ಪಲ್ಟಿಯಾಗಿರುವಂಥದ್ದು. ಚಾಲಕ ಶಿರಾ ನಿವಾಸಿ ಇಮ್ರಾನ್ ಕಾಲಿಗೆ ಪೆಟ್ಟು ಬಿದ್ದಿದೆ. ಮತ್ತಿಬ್ಬರು ಪರಾರಿಯಾಗಿದ್ದಾರೆ. ಕ್ಯಾಂಟರ್ ದಾವಣಗೆರೆಯಿಂದ ಮಂಗಳೂರಿಗೆ ಹೋಗುವ ವೇಳೆ ಗುರುವಾರ ತಡರಾತ್ರಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:‘ಸಾರ್ವಜನಿಕರು ಸಹಕರಿಸಿ’ – ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ !
ಕ್ಯಾಂಟರ್ ನಲ್ಲಿ 20ಕ್ಕೂ ಅಧಿಕ ಎತ್ತು ಮತ್ತು ಎಮ್ಮೆಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದ್ದು 11 ಸ್ಥಳದಲ್ಲೇ ಮೃತಪಟ್ಟಿವೆ. ಉಳಿದ ಜಾನುವಾರುಗಳು ಗಾಯಗೊಂಡಿವೆ. ಜಾನುವಾರುಗಳನ್ನು ಕಸಾಯಿಖಾನೆ ಸಾಗಿಸಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು ತನಿಖೆಯಿಂದ ಹೊರಬರಬೇಕಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗೋಪೂಜೆ ನೆರವೇರಿಸಿದ ಸಿಎಂ ಬಿಎಸ್​ ಯಡಿಯೂರಪ್ಪ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
