ಬಾಗಲಕೋಟೆ:ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ ಮಮತಾ ಗುಡೂರ (75) ತಮ್ಮ ಸ್ವಗೃಹದಲ್ಲೇ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ತೃತ ಕಲಾವಿದೆಯಾಗಿದ್ದ ಮಮತಾ ಗುಡೂರ ಮೆದುಳಿನ ರಕ್ತಸ್ರಾವದಿಂದ ಕೆಲ ತಿಂಗಳಿಂದ ಬಳಲುತ್ತಿದ್ದ ಇವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಇವರು ಒಟ್ಟು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದು, 25 ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಮತಾ ಗುಡೂರ, ವಜ್ರಮುನಿ ಅಂಬರೀಷ್ ಸೇರಿದಂತೆ ಅನೇಕ ದಿಗ್ಗಜರೊಂದಿಗೆ ತೆರೆ ಹಂಚಿಕೊಂಡಿದ್ದು ಇತ್ತೀಚೆಗೆ ಕೇಬಲ ನಾಟಕಗಳಲ್ಲಿ ಮಾತ್ರವೇ ಅಭಿನಯಿಸುತ್ತಿದ್ದರು.
ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಬಿಎಸ್ಆರ್ ಡ್ರಾಮಾ ಕಂಪನಿಯ ಸೆರೆ ಅಂಗಡಿ ಸಂಗವ್ವ ನಾಟಕದಲ್ಲಿ ಮನೋಜ್ಞ ಅಭಿನಯ ಮಾಡಿದ್ದ ಇವರು, ಸಂಗವ್ವ ಪಾತ್ರದಲ್ಲಿ ಖಡಕ್ ಡೈಲಾಗ್ ಹೊಡೆಯುತ್ತಾ ಸೆರೆ ಅಂಗಡಿ ಸಂಗವ್ವ ಎಂದೇ ಗುರುತಿಸಿಕೊಂಡಿದ್ದರು. ಇವರ ಕಲಾಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿತ್ತು.
ಇಂದು ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಗ್ರಾಮದಲ್ಲಿ ಮುಸ್ಲಿಂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
