
ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದಎಂ.ಆರ್.ಮಮತ(47) ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಪತ್ರಕರ್ತೆಯಾಗಿದ್ದ ಅವರು ವಾರ್ತಾ ಇಲಾಖೆಗೆ ಸೇರಿದ ಮೇಲೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಹಿರಿಯ ಪತ್ರಕರ್ತ ಎಚ್.ಆರ್.ರವೀಶ್ ಹಾಗೂ ಅವರ ಮಗ ಪ್ರಜ್ವಲ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮಮತ ಅವರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ:ಹಿರಿಯ ವಾರ್ತಾಧಿಕಾರಿ ಮಮತಾ ಅವರ ನಿಧನಕ್ಕೆ ವಾರ್ತಾ ಇಲಾಖೆ ಅಧಿಕಾರಿಗಳ ಬಳಗ ಮತ್ತುಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲುಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
