ಮಂಗಳೂರು:ಮಂಗಳೂರಿನ ಯುವಕನೊಬ್ಬ ಪಕ್ಕದ ಮನೆ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಶೂಟ್ ಮಾಡಿದ್ದು ಸ್ಥಳೀಯರು ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಶೂಟ್ ಮಾಡಿದ ಆರೋಪಿಯನ್ನು ಸುಮಂತ್ ಪೂಜಾರಿ(22) ಎಂದು ಗುರುತಿಸಲಾಗಿದೆ. ವಿಡಿಯೋ ಮಾಡಿದ ಸುಮಂತ್ ವಿರುದ್ದ ಯುವತಿಯ ಅಣ್ಣ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಆತನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈತ, ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಬಚ್ಚಲು ಮನೆಯಲ್ಲಿ ಮೊಬೈಲ್ ಇಟ್ಟಿದ್ದ. ಆದರೆ ಯುವತಿಯ ಬದಲಾಗಿ ಯುವತಿಯ ಅಣ್ಣ ಬಚ್ಚಲು ಮನೆಗೆ ಸ್ನಾನಕ್ಕಾಗಿ ಬಂದಿದ್ದ. ಈ ಸಂದರ್ಭ ಆತ, ಬಚ್ಚಲು ಮನೆಯಲ್ಲಿ ಮೊಬೈಲ್ ಇರುವುದನ್ನು ಗಮನಿಸಿದ್ದು ಆತನ ಕೈಗೆ ಸುಮಂತ್ ಸಿಕ್ಕಿಬಿದ್ದಿದ್ದಾನೆ.
ಯುವತಿಯ ಅಣ್ಣ ಪ್ರಜ್ವಲ್, ಸುಮಂತ್ ವಿರುದ್ದ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸುಮಂತ್ ಪೂಜಾರಿಯನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈತ ಹಿಂದೂ ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
