ಹನೂರು:ಹಂಡತಿ ಬಿಟ್ಟು ಹೋಗಿದ್ದ ವ್ಯಕ್ತಿಯೋರ್ವ ತನ್ನ ಕಾಮತೃಷೆಗಾಗಿ ಅಪ್ರಾಪ್ತ ವಯಸ್ಕ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್​ ಠಾಣಾ ವ್ಯಾಪ್ತಿಯ ನಿವಾಸಿಯಾದ ಅರುಣ್​ (31) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವಾಗ ಮಧ್ಯದ ಬೆರಳು ತೋರಿ ವಿಕೃತಿ ಮೆರೆದ ವ್ಯಕ್ತಿ; ವಿಡಿಯೋ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಅರುಣ್​ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದು, ಈತನಿಗೆ ಮದುವೆಯಾಗಿದ್ದು, ಪತ್ನಿ ಜೊತೆಗೆ ಇರದೆ ಬಿಟ್ಟು ಹೋಗಿದ್ದಾಳೆ. ಜೂನ್​ 29ರಂದು ಬಾಲಕ ಶಾಲೆ ಮುಗಿಸಿಕೊಂಡು ಮನೆಗೆ ಬಂದು ತನ್ನ ತಮ್ಮನ ಜೊತೆ ಆಟವಾಡುತ್ತಿದ್ದಾಗ ಆರೋಪಿಯು ಬಾಲಕನನ್ನು ತನ್ನ ಮನೆಗೆ ಹೊತ್ತೊಯ್ದು ದೌರ್ಜನ್ಯ ಎಸಗಿದ್ದಾನೆ.
ಬಳಿಕ ಈ ವಿಚಾರ ಬಾಲಕನ ತಾಯಿಗೆ ತಿಳಿದಿದ್ದು, ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
