ಕೋಲಾರ:ಲಂಚ ಪಡೆಯುವ ವೇಳೆ ಇಲ್ಲೊಬ್ಬರು ಗೃಹರಕ್ಷಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಿಗೆ ಬಿದ್ದಿದ್ದಾರೆ. ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್​ 6000 ರೂಪಾಯಿ ಲಂಚ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ:ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದಾಗ ಸಿಕ್ತು ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ!
ಸುಬಾನಾಯಕ್​ ಎಂಬುವವರ ಬಳಿ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿ ಕೊಡಲು 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅವರು ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್​ ನೇತೃತ್ವದ ತಂಡ ಬಲೆ ಬೀಸಿದ್ದು ರಾಜೇಂದ್ರನ್ ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಗ್ರಾಪಂ ಕಾರ್ಯದರ್ಶಿ: ಖಾತೆ ಮಾಡಿಕೊಡಲು ಲಂಚ ಸ್ವೀಕಾರ ಆರೋಪ
ಸದ್ಯ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
