ಚಿಕ್ಕಬಳ್ಳಾಪುರ:ಪ್ರೇಯಸಿಯನ್ನು ಪತ್ನಿಯಾಗಿಸಿಕೊಳ್ಳಲು ಆಗುವುದಿಲ್ಲ ಎಂದು ಬೇಸತ್ತ ಪ್ರೇಮಿಯೊಬ್ಬ ಆಕೆಗಾಗಿ ಜೀವ ಕಳೆದುಕೊಳ್ಳಲು ಲೈವ್ ಆಗಿ ವಿಷ ಸೇವಿಸಿದ ಪ್ರಕರಣವೊಂದು ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ತಿರ್ನಹಳ್ಳಿ ಗ್ರಾಮದಲ್ಲಿ ಇಂಥದ್ದೊಂದು ಘಟನೆ ವರದಿಯಾಗಿದೆ.
ಇಲ್ಲಿನ ಕಳವಾರ ಗ್ರಾಮದ ಕಿಶೋರ್​ (25) ಪ್ರೇಯಸಿಗಾಗಿ ವಿಷ ಕುಡಿದ ಪ್ರೇಮಿ. ಈತ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆಯೊಂದಿಗೆ ಒಡನಾಟವನ್ನೂ ಹೊಂದಿದ್ದ. ಆದರೆ ಆಕೆ ಈತನನ್ನು ಮದುವೆಯಾಗದಂತೆ ಅವಳ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಒಂದೇ ಮರದಲ್ಲಿ ನೇತಾಡುತ್ತಿದ್ದವು ಎರಡು ಶವಗಳು!
ವಿರೋಧ ಮಾತ್ರವಲ್ಲದೆ ಪ್ರೇಯಸಿಯ ಮನೆಯವರಿಂದ ಕಿರುಕುಳ ಕೂಡ ನೀಡಿದ್ದಾರೆ ಎಂದು ಆರೋಪಿಸಿ, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ ಈತ ಇವೆಲ್ಲವನ್ನೂ ಲೈವ್ ಮಾಡಿ ವಿಷ ಕುಡಿದಿದ್ದಾನೆ. ತೀವ್ರ ಅಸ್ವಸ್ಥಗೊಂಡಿರುವ ಈತನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 18 =
Remember me
