ದಾವಣಗೆರೆ:ವ್ಯಕ್ತಿಯೊಬ್ಬನ ತಲೆಗೆ ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡುವ ಮೂಲಕ ಹಳೇ ದ್ವೇಷದ ಪ್ರಕರಣ ಕೊಲೆಯವರೆಗೂ ಹೋದಂತಾಗಿದೆ. ದಾವಣಗೆರೆಯಲ್ಲಿ ಇಂಥದ್ದೊಂದು ಭೀಕರ ಹತ್ಯೆ ನಡೆದಿದೆ.
ಪ್ರಶಾಂತ (29) ಭೀಕರವಾಗಿ ಕೊಲೆಯಾದ ವ್ಯಕ್ತಿ. ದಾವಣಗೆರೆಯ ನಗರದ ಕಬ್ಬೂರು ಬಸಪ್ಪ ನಗರದಲ್ಲಿ ಈ ಘಟನೆ ನಡೆದಿದೆ. ರಾಕೇಶ್ ಎಂಬಾತನೇ ಕೊಲೆ ಆರೋಪಿ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಕೊಲೆ ಮಾಡಿದ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಆರೋಪಿ ರಾಕೇಶ್ ಮತ್ತು ಪ್ರಶಾಂತ್ ಸ್ನೇಹಿತರು. ಆದರೆ ಕೆಲವು ದಿನಗಳಿಂದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು. ಇಬ್ಬರ ಮಧ್ಯೆ ರಾಜಿ ಮಾಡಿಸಿದ್ದರೂ ದ್ವೇಷ ಮುಂದುವರಿದಿತ್ತು. ಅದೇ ಹಳೇ ದ್ವೇಷದಿಂದಾಗಿ ರಾಕೇಶ್ ತನ್ನ ಪ್ರಶಾಂತ್​ನ ತಲೆಗೆ ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹೊಡೆತದ ತೀವ್ರತೆಗೆ ಪ್ರಶಾಂತ್​ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್​ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರ್​ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಳ್ಳುಹಂದಿಯ ಆಸೆಗೆ ಪ್ರಾಣವನ್ನೇ ಕಳೆದುಕೊಂಡ್ರು; ಗುಹೆಯೊಳಗೆ ಉಸಿರುಗಟ್ಟಿ ಇಬ್ಬರ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
