ಹಾಸನ:ಕಾಡುಪ್ರಾಣಿಯನ್ನು ಕಂಡರೆ ಹೆದರಿ ಓಡಿ ಹೋಗುವವರೇ ಅಧಿಕ. ಆದರೆ ಇಲ್ಲೊಬ್ಬ ಹಾಗೆ ಮಾಡದೆ ಸಾಹಸ ಮೆರೆದಿದ್ದಾನೆ. ಚಿರತೆಯೊಂದನ್ನು ಹಿಡಿದಿದ್ದಲ್ಲದೆ ಅದನ್ನು ತನ್ನ ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯವರಿಗೆ ತೆಗೆದುಕೊಂಡು ಹೋಗಿ ಒಪ್ಪಿಸಿದ್ದಾನೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಬಾಗಿವಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಅಲಿಯಾಸ್ ಮುತ್ತು ಈ ಸಾಹಸ ಮಾಡಿದ್ದಾನೆ. ಇದನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು ಎಲ್ಲೆಡೆ ಹರಿದಾಡಲು ಆರಂಭಿಸಿದೆ.
ವೇಣುಗೋಪಾಲ್ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿತ್ತು. ಧೈರ್ಯ ಸಾಹಸ ಮೆರೆದು ಚಿರತೆಯನ್ನು ಹಿಡಿದಿದ್ದಲ್ಲದೆ, ಬೈಕ್​ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ. ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಿರತೆಗೆ ಗಂಡಸಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ನಲ್ಲಿ ಕಟ್ಟಿಕೊಂಡು ಹೋದ ಧೀರ!ವಿವರಗಳಿಗೆhttps://t.co/YaFZZchf1Jನೋಡಿ..pic.twitter.com/3AQNs1ahQj
— Vijayavani (@VVani4U)July 14, 2023


ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
