ಬೆಂಗಳೂರು:ಬರೋಬ್ಬರಿ 1.2 ಕೆ.ಜಿ ತೂಕದ ಚಿನ್ನವನ್ನು ಚಪ್ಪಲಿಯಲ್ಲಿ ಅಕ್ರಮವಾಗಿ ತಂದಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್​ ಮಾಡಲಾಗಿದೆ.
ಕಳ್ಳಸಾಗಣೆ ನಡೆಯದಂತೆ ಅಧಿಕಾರಿಗಳು ಇದೀಗ ವಿಮಾನದಲ್ಲಿ ಪ್ರಯಾಣಿಕರನ್ನು ಪರಿಶೀಲನೆ ಮಾಡಲಾಗುತ್ತಿದೆ. ಚಪ್ಪಲಿಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ; ಏಮ್ಸ್‌ ವೈದ್ಯರಿಂದ ಯಶಸ್ವಿ ಚಿಕಿತ್ಸೆ
ಮಾರ್ಚ್ 12 ರಂದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಡೆದಿದ್ದರು. ಆತ ವೈದ್ಯಕೀಯ ಉದ್ದೇಶಕ್ಕೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದನು. ಆದರೆ ವ್ಯಕ್ತಿ ಯಾವುದೇ ವೈದ್ಯಕೀಯ ದಾಖಲೆಗಳನ್ನು ನೀಡಲು ವಿಫಲನಾಗಿದ್ದಾನೆ. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಚಪ್ಪಲಿಯಲ್ಲಿ ಗುಳಿಗಳನ್ನು ರಚಿಸಿ, ಚಿನ್ನದ ಗಟ್ಟಿಗಳನ್ನು ಹುದುಗಿಸಿಟ್ಟಿರುವುದು ಕಂಡುಬಂದಿದೆ.
ಒಂದು ಜೊತೆ ಚಪ್ಪಲಿಯಲ್ಲಿ ಒಟ್ಟು 4 ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ವ್ಯಕ್ತಿಯ ಬಳಿಯಿಂದ ಒಟ್ಟು 69.40 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧತೆಯ ಸುಮಾರು 1.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
#WATCH| Gold weighing 1.2 kg worth Rs 69.40 lakh seized from a slipper of a passenger who arrived from Bangkok in Bengaluru by IndiGo flight: Customspic.twitter.com/4dBwb5Dhpv
— ANI (@ANI)March 15, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
