ಶಿವಮೊಗ್ಗ:ಆಕೆ ಸ್ನೇಹಿತನ ಜತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದಳು. ಆದರೆ ಆಕೆಯ ತಮ್ಮ ಅದೇ ಸಿಟ್ಟಿಗೆ ಅವಳನ್ನೇ ಕೊಲೆ ಮಾಡಿದ. ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂಥದ್ದೊಂದು ದುರಂತ ತುಮಕೂರಿನಿಂದ ಶಿವಮೊಗ್ಗದವರೆಗೂ ವ್ಯಾಪಿಸಿದೆ.
ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣ ಸಮೀಪದ ಖಾಸಗಿ ಲಾಡ್ಜ್​ನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣ ಈ ಎಲ್ಲ ವಿಷಯವನ್ನೂ ಬೆಳಕಿಗೆ ತಂದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಸೂರಗೊಂಡನಹಳ್ಳಿ ಗ್ರಾಮದ ಮಂಜುನಾಥ್ (26) ಈ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಸೆ.13ರಂದೇ ಬಂದಿದ್ದು, ಖಾಸಗಿ ಲಾಡ್ಜ್​​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ಈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಕೊಳೆತು ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಸ್ಥಳ ಪರಿಶೀಲನೆಗೆ ಬಂದ ಪೊಲೀಸರಿಗೆ ಡೆತ್​ನೋಟ್ ಸಿಕ್ಕಿದ್ದು, ಅದರಲ್ಲಿ ಈತ ಒಂದಷ್ಟು ವಿಷಯವನ್ನು ಬರೆದಿಟ್ಟಿದ್ದ.
ತನ್ನ ಅಕ್ಕ ಸುಧಾ ಸ್ನೇಹಿತನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದು, ಆ ಕುರಿತ ಕೋಪದಿಂದ ತಾನು ಅಕ್ಕನನ್ನೇ ಕೊಲೆ ಮಾಡಿದ್ದಾಗಿ ಬರೆದುಕೊಂಡಿರುವ ಮಂಜುನಾಥ್, ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಆತ್ಮಹತ್ಯೆಗೆ ಕಾರಣ ಏನು ಎಂಬುದು ನಿಖರವಾಗಿ ಇನ್ನಷ್ಟೇ ತಿಳಿದುಬರಬೇಕಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಆತ್ಮಹತ್ಯೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕನ್ನಡಿಗರನ್ನು ಕೆರಳಿಸುತ್ತಿರುವ ಮರಾಠಿ ‘ಬಾಯ್ಸ್​’; ಸಿನಿಮಾವನ್ನೇ ನಿಷೇಧಿಸುವಂತೆ ಎದ್ದಿದೆ ವಾಯ್ಸ್​..
ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
